ಟಿಬಿ ಡ್ಯಾಂನ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್‌, ಅಪಾರ ನೀರು ನದಿಗೆ: ಆತಂಕದಲ್ಲಿ ನದಿ ಪಾತ್ರದ ಜನರು ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ.

Vijayanagara Vani
   ಟಿಬಿ ಡ್ಯಾಂನ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್‌, ಅಪಾರ ನೀರು ನದಿಗೆ: ಆತಂಕದಲ್ಲಿ ನದಿ ಪಾತ್ರದ ಜನರು ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ.

ಕೊಪ್ಪಳ(ಆ.11): ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ.

ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ರಾತ್ರೋರಾತ್ರಿ ಸಚಿವ ಶಿವರಾಜ್‌ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್‌ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ

ಭೇಟಿ ನಂತರ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, ಡ್ಯಾಂಗೆ ಬಂದು ವೀಕ್ಷಣೆ ಮಾಡಿದ್ದೇನೆ, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಡ್ಯಾಂ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ. ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. 20 ಫೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಏನಾಗಿದೆ ಅಂತ ಗೊತ್ತಾಗಲಿದೆ. ಹೀಗಾಗಿ ಡ್ಯಾಂ ನಲ್ಲಿರೋ ನೀರನ್ನು ಖಾಲಿ ಮಾಡೋ ಅನಿವಾರ್ಯತೆ ಉಂಟಾಗಿದೆ. ಡ್ಯಾಂ ನಿರ್ಮಾಣ ಸಮಯದಲ್ಲಿನ ಡಿಜೈನ್ ತರಿಸಲಾಗುತ್ತಿದೆ. ನೀರಿನ ಫೋರ್ಸ್ ಹೆಚ್ಚಿರೋದರಿಂದ ಕೆಳಗಿಳಿದು ಕೆಲಸ ಮಾಡಲು ಆಗಲ್ಲಾ. ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 2.35 ಲಕ್ಷ ಕ್ಯೂಸೆಕ್ ನೀರು ಬಿಟ್ಟರು ಯಾರಿಗೂ ಯಾವುದೇ ತೊಂದರೆ ಆಗಲ್ಲ. 2.50ಸಿಎಂ ಮತ್ತು ಡಿಸಿಎಂ ಗೆ ಮಾಹಿತಿ ನೀಡಲಾಗುತ್ತಿದೆ. ಬೆಂಗಳೂರು, ಹೈದ್ರಾಬಾದ್, ಚೆನ್ನೈ ನಿಂದ ತಜ್ಞರ ತಂಡ ಬರಲಿದೆ. ಇಂದು ಮುಂಜಾನೆ ತಜ್ಞರ ತಂಡಗಳು ಡ್ಯಾಂಗೆ ಆಗಮಿಸಿ ಪರಿಶೀಲನೆ ನಡೆಸಲಿವೆ ಎಂದು ತಿಳಿಸಿದ್ದಾರೆ

WhatsApp Group Join Now
Telegram Group Join Now
Share This Article
error: Content is protected !!