ಮಹಿಳಾ ನಿಲಯಕ್ಕೆ ಭೇಟಿ ಶೋಷಿತ ಮಹಿಳೆಯರ ಸಮಸ್ಯೆ ಆಲಿಸಿದಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Vijayanagara Vani
ಮಹಿಳಾ ನಿಲಯಕ್ಕೆ  ಭೇಟಿ ಶೋಷಿತ ಮಹಿಳೆಯರ ಸಮಸ್ಯೆ ಆಲಿಸಿದಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಳ್ಳಾರಿ,ಜು.06ನಗರದ ಶಾಂತಿಧಾಮ ಅವರಣದಲ್ಲಿರುವ ರಾಜ್ಯ ಮಹಿಳಾ ನಿಲಯಕ್ಕೆ ಶನಿವಾರ ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭೇಟಿ ನೀಡಿದರು.

ಇದೇ ವೇಳೆ ಶೋಷಣೆಗೆ ಒಳಗಾದ ಹೆಣ್ಣು ಮಕ್ಕಳ ಕುಂದು ಕೊರತೆಗಳನ್ನು ಆಲಿಸಿದರು. ಮಹಿಳಾ ನಿಲಯದಲ್ಲಿ ಆಶ್ರಯ ಪಡೆಯಲು ಕಾರಣವೇನು ಎನ್ನುವುದನ್ನು ಮಹಿಳೆಯರಲ್ಲಿ ಪ್ರಶ್ನಿಸಿದರು. ದೌರ್ಜನಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದರು. ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಿಯೆಂದು ಸಚಿವರು ಸಲಹೆ ನೀಡಿದರು.

ಬಳಿಕ, ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ತೆರೆಯಲಾಗಿರುವ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ಭೇಟಿ ನೀಡಿ, ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್.ನಿಶ್ಚಲ್, ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

WhatsApp Group Join Now
Telegram Group Join Now
Share This Article
error: Content is protected !!