Ad image

*ಶಕ್ತಿ ಯೋಜನೆಗೆ 12 ಸಾವಿರದ 800 ಕೋಟಿ ಅನುದಾನ: ಪಿ. ರವಿಕುಮಾರ್*

Vijayanagara Vani
*ಶಕ್ತಿ ಯೋಜನೆಗೆ 12 ಸಾವಿರದ 800 ಕೋಟಿ ಅನುದಾನ: ಪಿ. ರವಿಕುಮಾರ್*
ರಾಜ್ಯಾದ್ಯಂತ ಪಂಚ ಗ್ಯಾರಂಟಿಗಳು ಎರಡೂ ವರ್ಷಗಳನ್ನು ಪೂರೈಸಿದೆ. ಶಕ್ತಿ ಯೋಜನೆ ಒಂದಕ್ಕೆ 12 ಸಾವಿರದ 800 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು.
ಇಂದು (ಜು.14) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಶಕ್ತಿ ಯೋಜನೆ ರಾಜ್ಯದ ಅನೇಕ ಮಹಿಳೆಯರಿಗೆ ಸಹಕಾರಿಯಾಗಿದೆ. ರಾಜ್ಯಾದ್ಯಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳಾ ಟಿಕೆಟ್ ವಿತರಿಸಲಾಗಿದೆ. ಇದೊಂದು ಐತಿಹಾಸಿಕ ದಾಖಲೆ ಎಂದರೆ ತಪ್ಪಾಗಲಾರದು ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳು ರಾಜ್ಯದ ಎಷ್ಟೋ ಕುಟುಂಬಗಳಿಗೆ ಆಸರೆಯಾಗಿದೆ. ಗೃಹಿಣಿಯರು ಗೃಹಲಕ್ಷ್ಮಿ ಹಣ ಶೇಖರಿಸಿ ಹಸು, ಅಂಗಡಿ, ಲೈಬ್ರರಿ ಮತ್ತು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಗೆ ಹಾಗೂ ಮುಂತಾದ ಕಾರಣಗಳಿಗೆ ಸಮರ್ಪಕವಾಗಿ ಉಯೋಗಿಸಿಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರದ ಮೂಲ ಉದ್ದೇಶ ಬಡ ಜನರ ಜೀವನ ಮಟ್ಟವನ್ನು ಸುಧಾರಿಸುವುದು. ಆದ್ದರಿಂದಲೇ ಪಂಚ ಗ್ಯಾರಂಟಿಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಯಿತು. ಇಂದು ಗ್ಯಾರಂಟಿ ಯೋಜನೆಗಳು ಎಷ್ಟೋ ಕಡುಬಡ ಕುಟುಂಬಗಳಿಗೆ ಆಸರೆಯಾಗಿದೆ ಎಂದು ಹೇಳಿದರು.
*ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟನೆ*
ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟಿಸಿ
ವಸ್ತು ಪ್ರದರ್ಶನದ ಪ್ರಾತ್ಯಕ್ಷಿಕೆಗಳನ್ನು ವಿಕ್ಷೀಸಿದರು.
ನಂತರ ಫಲಾನುಭವಿಗಳೊಂದಿಗೆ ಫೊಟೋ ಕ್ಲಿಕ್ಕಿಸಿಕೊಂಡರು. ನಗರದ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿದ ಪ್ರಯಾಣಿಕರಿಗೆ ಸಿಹಿ ವಿತರಸುವ ಮೂಲಕ ಸಂಭ್ರಮಿಸಿದರು.
ನಂತರ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ 500 ಕೋಟಿಗೂ ಹೆಚ್ಚು ಮಹಿಳಾ ಟಿಕೆಟ್ ವಿತರಿಸಿರು ಹಿನ್ನೆಲೆ ಸಾಂಕೇತಿಕವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ, ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು, ಮಂಡ್ಯ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರುದ್ರಪ್ಪ , ವಿಭಾಗೀಯ ಸಂಚಾರಾಧಿಕಾರಿ ಪರಮೇಶ್ವರಪ್ಪ, ಡಿಪೋ ಮ್ಯಾನೇಜರ್ ರಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share This Article
error: Content is protected !!
";