ವೈದ್ಯರಿಲ್ಲದೆ ರೋಗಿಗಳ ಪರದಾಟ

Share and Enjoy !

Shares
Listen to this article

ವಿಜಯನಗರವಾಣಿ
ರಾಯಚೂರು ಜಿಲ್ಲೆ

ಸಿಂಧನೂರು: ಶಾಸಕ ವೆಂಕಟರಾವ್ ನಾಡಗೌಡ ಅವರ ಸ್ವಗ್ರಾಮದಲ್ಲೇ ವೈದ್ಯರಿಲ್ಲದೇ ರೋಗಿಗಳ ಪರದಾಟ.
ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ಅಲೆದಾಟ
ತಾಲ್ಲೂಕಿನ ಜವಳಗೇರಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಸುಮಾರು 25 ದಿನಗಳಿಂದ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಆರೋಗ್ಯ ಕೇಂದ್ರಕ್ಕೆ ಕೇವಲ ಜವಳಗೇರಾ ಗ್ರಾಮವಲ್ಲದೆ ಅಕ್ಕಪಕ್ಕದ ಗ್ರಾಮದ ಜನರು ಸಹ ವೈದ್ಯಕೀಯ ಸೇವೆಯನ್ನು ಪಡೆಯಲು ಇದೇ ಆರೋಗ್ಯ ಕೇಂದ್ರವನ್ನು ಅವಲಂಬಿಸುತ್ತಾರೆ.

ಆದರೆ ಕಳೆದ 25 ದಿನಗಳಿಂದ ಯಾವ ಒಬ್ಬ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಆರೋಗ್ಯ ಆಡಳಿತ ಅಧಿಕಾರಿ ಡಾ! ನಾಗರಾಜ್ ಪಾಟೀಲ್ ಈ ಆರೋಗ್ಯ ಕೇಂದ್ರಕ್ಕೆ ಯಾವ ಒಬ್ಬ ವೈದ್ಯರನ್ನು ನಿಯೋಜನೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ.
ಇದರಿಂದ ದಿನನಿತ್ಯ ನೂರಾರು ಜನರು ವೈದ್ಯಕೀಯ ಸೇವೆ ಪಡೆಯಲು ತಾಲೂಕಿನ ಸಾರ್ವಜನಿಕ ಆಸ್ಪತ್ರೆ ತೆರಳುವ ಸ್ಥಿತಿ ನಿರ್ಮಾಣ ವಾಗಿದೆ.
ಈ ಮಹಾಮಾರಿ ಕೊರೋನ್
ಸಮಯದಲ್ಲಿ ಪ್ರಮುಖವಾಗಿ ವೈದ್ಯಕೀಯ ಸೇವೆಯು
ಅತ್ಯವಶ್ಯಕವಾಗಿದ್ದು.ಆದರೆ
ಯಾವುದಾದರೂ ತುರ್ತು ಆರೋಗ್ಯ ಸೇವೆ ಪಡೆಯಲು ತಾಲ್ಲೂಕು ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದ್ದು
ವಿಪರ್ಯಾಸವೆ ಸರಿ.
ಶಾಸಕ ವೆಂಕಟರಾವ್ ನಾಡಗೌಡ ಅವರ ಸ್ವಗ್ರಾಮದಲ್ಲಿ ವೈದ್ಯರನ್ನು ನಿಯೋಜನೆ ಮಾಡದೆ ಇರೊದು ರೋಗಿಗಳ ಆಕ್ರೋಶಕ್ಕೆ ಕಾರಣ ವಾಗಿದೆ.
ಇನ್ನೂ ಆದರೂ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನಿಯೋಜನೆ ಮಾಡುತ್ತಾರಾ ಕಾದು ನೋಡಬೇಕಿದೆ.

Share and Enjoy !

Shares