ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸುಗೂರು : ಕೂಲಿಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.
ಶಿರಸ್ತೆದಾರರ ಮೂಲಕ ಪ್ರದಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ದೇಶಾದ್ಯಂತ ಕೋವಿಡ್-19 ಸೋಂಕಿನಿಂದ ರೈತರು, ಕಾರ್ಮಿಕರು, ಕೃಷಿ ಕೂಲಿಕಾರರು ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಪ್ರತಿಯೊಬ್ಬರಿಗೂ ಮುಂದಿನ 6 ತಿಂಗಳವರೆಗೆ ಮಾಸಿಕ 7500 ರೂಪಾಯಿ ಕೋವಿಡ್ ಪರಿಹಾರ ನೀಡಬೇಕು. ಪ್ರತಿಯೊಬ್ಬರಿಗೆ ಉಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಉಚಿತ ಔಷಧೋಪಚಾರ ನೀಡಬೇಕು. ಕುಟುಂಬದ ಪ್ರತಿ ಸದಸ್ಯನಿಗೂ ಮಾಸಿಕ 10 ಕೆ.ಜಿ. ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ 200 ದಿನಕ್ಕೆ ಹೆಚ್ಚಿಸಿ ವೇತನ ಕನಿಷ್ಟ 600 ರೂಪಾಯಿಗಳಿಗೆ ಹೆಚ್ಚಿಸಿ ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರ ಸಂಪರ್ಕ, ವಿಮಾ, ಬ್ಯಾಂಕ್ ಖಾಸಗೀಕರಣ ಪ್ರಕರಣ ತಡೆಯಬೇಕು. ಭೂ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾನೂನು ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ಸೇವಾ ಸುಘ್ರೀವಾಜ್ಞೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ, ಎಐಎಡಬ್ಲ್ಯೂಯು ತಾಲೂಕು ಅಧ್ಯಕ್ಷ ಮಲ್ಲೇಶ, ಸಿಐಟಿಯು ಜಿಲ್ಲಾ ಸಹಕಾರ್ಯದರ್ಶಿ ಅನೀಫ್, ಸದ್ಧಾಂ ಹುಸೇನ್, ಶರಣಮ್ಮ, ಅಮರೇಗೌಡ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು