ರಾಷ್ಟ್ರೀಯ ಶಿಕ್ಷಣ ನೀತಿ 2020 ರಾಜ್ಯ ವಿಧಾನಪರಿಷತ್ತಿನ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ನೀಡುಬೇಕು ಎಸ್. ಐ.ಓ ಆಗ್ರಹ

Share and Enjoy !

Shares
Listen to this article

 

ವಿಜಯನಗರವಾಣಿ ಸುದ್ದಿ:

ರಾಯಚೂರು ಜಿಲ್ಲೆ :

ಲಿಂಗಸೂಗೂರೂ :ರಾಷ್ಟ್ರೀಯ ಶಿಕ್ಷಣ ನೀತಿ -2020 ಅನ್ನು ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಅವಕಾಶ ನೀಡುವ ಕುರಿತು . ಜುಲೈ 29 ರಂದು ರಾಷ್ಟ್ರೀಯ ಶಿಕ್ಷಣ -2020 ನೀತಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟವು ಯಾವುದೇ ರೀತಿಯ ಚರ್ಚೆ ನಡೆಸದೆ ಜಾರಿಗೊಳಿಸಲು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದು ಅದರಂತೆ ರಾಜ್ಯ ಸರ್ಕಾರವು ಮುಂದಾಗಿದ್ದು ಪ್ರಜಾಸತ್ತಾತ್ಮಕವಾಗಿ ಇದು ಉತ್ತಮ ಬೆಳವಣಿಗೆಗೆ ಅಲ್ಲ ಎಂಬುದು ನಮ್ಮ ಅಭಿಪ್ರಾಯವಾಗಿದೆ ಈ ರಾಷ್ಟ್ರೀಯ ಶಿಕ್ಷಣ ನೀತಿಯು 3 ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ ಕಾಲಾ ಶಿಕ್ಷಣ ವ್ಯರ್ಪಜ್ಞೆಯನ್ನು ಸಮಗ್ರವಾಗಿ ಬದಲಾಯಿಸುತ್ತದೆ ಎಂದು ಶಿಕ್ಷಣ ತಜ್ಞರ ಅಭಿಪ್ರಾಯದಿಂದ ತಿಳಿದಿಕೊಂಡಿದ್ದೇವೆ ಆದರೆ , ಈ ನೀತಿಯ ಕೈಪಿಡಿಯನ್ನು ರಾಜ್ಯದ ಜನರ ಓದಿಗೆ ಲಭ್ಯವಾಗಿಸಿ ಸಾರ್ವಜನಿಕ ರಂಗದಲ್ಲಿ ಮುಕ್ತ ಚರ್ಚೆ – ಸಂವಾದಕ್ಕೆ ಅದರ ವಿಮರ್ಶೆ ಮತ್ತು ವಿಶ್ಲೇಷಣೆಗೆ ಅವಕಾಶ ಕಲ್ಪಿಸದೇ ನಮ್ಮ ರಾಜ್ಯ ಸರ್ಕಾರವು ಈ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಮಾತನಾಡುತ್ತಿದ್ದು ಸನ್ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರು ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲೇ ಕರ್ನಾಟಕ ರಾಜ್ಯದಲ್ಲಿ ಮೊದಲಿಗೆ ಜಾರಿ ಮಾಡುವ ಹೇಳಿಕೆಗಳನ್ನು ನೀಡಿದ್ದಾರೆ , ಶಿಕ್ಷಣ ಹಕ್ಕು ಕಾಯಿದೆ ಕಲಂ 6 , 9 , 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ ಶಾಲಾ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ಮತ್ತು ಗ್ರಾಮ ಪಂಚಾಯತಿಗಳ ಮೇಲಿರುವುದರಿಂದ ನೀತಿಯನ್ನು ಸಾರ್ವಜನಿಕರ ಓದಿಗೆ ಮತ್ತು ಬೆಳಿಗ್ಗೆ ಅವಕಾಶ ನೀಡಿ ನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸುವುದು ಬಹಳ ಮುಖ್ಯವಾಗುತ್ತದೆ . ಮೂಲ ವಾರಸುದಾರರಾದ ನಾವು ನಮ್ಮ ಮಕ್ಕಳ ಶಿಕ್ಷಣವನ್ನು ಹೇಗೆ ರೂಪಿಸಲಾಗಿದೆ ಎಂಬುದನ್ನು ತಿಳಿಯದೆ ಅದನ್ನು ಜಾರಿಗೊಳಿಸುವುದು ಪ್ರಜಾಸತ್ತಾತ್ಮಕವಾಗಿ ಸರಿಯಾದ ಪ್ರಕ್ರಿಯೆಯಲ್ಲ , ಆದ್ದರಿಂದ ಅದನ್ನು ತರಾತುರಿಯಲ್ಲಿ ಜಾರಿಗೊಳಿಸಬಾರದೆಂದು ಸರ್ಕಾರವನ್ನು ಎಸ್.ಐ.ಓ ಒತ್ತಾಯಿಸುತ್ತೇವೆ . ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವುದರಿಂದ , ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡಲೇ ಜನಸ್ನೇಹಿ ಕೈಪಿಡಿಯನ್ನು ಸಾರ್ವಜನಿಕರಿಗೆ ಲಭ್ಯವಾಗಿಸಿ ಶಾಲೆ , ಪಂಚಾಯತ , ತಾಲ್ಲೂಕು , ಜಿಲ್ಲೆ ಹಾಗೂ ರಾಜ್ಯ ಹಂತದಲ್ಲಿ ಅದರ ಸಾಧಕ – ಬಾಧಕಗಳ ಬಗ್ಗೆ ಚರ್ಚಿಸಿ ಈ ಚರ್ಚೆಗಳ ಆಧಾರದ ಮೇಲೆ ನಮ್ಮ ರಾಜ್ಯಕ್ಕೆ ಅನುವಾಗುವ ಕರ್ನಾಟಕ ಶಿಕ್ಷಣ ನೀತಿ ‘ ( ಕಶಿನಿ ) ರೂಪಿನುವುದು ಸೂಕ್ತವೆಂದು ನಾವು ಭಾವಿಸುತ್ತೇವೆ . ಕರ್ನಾಟಕ ಶಿಕ್ಷಣ ನೀತಿಯನ್ನು ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಎರಡರಲ್ಲೂ ಮಂಡಿಸಿ ಚರ್ಚಿಸಿ ಅಂಗೀಕರಿಸಿದ ನಂತರವೇ ಜಾರಿಗೊಳಿಸಬೇಕೆಂದು ಎಸ್.ಐ.ಓ ಆಗ್ರಹಿಸುತ್ತದೆ . ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾಗಿರುವ ತಾವುಗಳು ನಮ್ಮ ಆಗ್ರಹವನ್ನು ಗಂಭೀರವಾಗಿ ಪರಿಗಣಿಸಿ ಮಲಬದುಟಿ ಚಳಿಯಲದ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಜನಪ್ರತಿನಿದಿಗಳಿಂದ ಮುಕ್ತ ಚರ್ಚೆಗೆ ಅವಕಾಶ ಕಲ್ಪಿಸಲು ಈ ಮೂಲಕ ಎಸ್. ಐ.ಓ ಲಿಂಗಸೂಗೂರೂ ಸಹಾಯ ಆಯುಕ್ತ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಲ್ಲಾಬಷ.ಶೇಖ ಆಫ್ರೀದ. ಮೌಲಾನಾ ಸೈಯದ್ ಅಬು ಖಾಸಿಂ .ಸಾಜೀದ. ಬಾಬಾ .ಗೌಸ್.ಶೌಕತ್ ಅಲಿ .ಅಬ್ದುಲ್ ನಯೀಮ್ ಇತರರು ಇದ್ದರು

Share and Enjoy !

Shares