ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸುಗೂರು : ಗ್ರಾಮ ಪಂಚಾಯತಿಯ ಹಣವನ್ನು ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚಿಸಿದ ಹಿನ್ನಲೆಯಲ್ಲಿ ತಾಲೂಕಿನ ಮೂರು ಜನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅಮಾನತ್ತು ಮಾಡಿದ್ದಾರೆ.
ತಾಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಜ್ಯೋತಿಬಾಯಿ ರೋಡಲಬಂಡ ( ತ ) ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ್ ಕೆಪಿ ಹಾಗೂ ಪೈದೊಡ್ಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಹೀರ್ ಹುಸೇನ್‌ರು ಕರ್ತವ್ಯ ನಿರ್ವಹಣೆಯಲ್ಲಿ ಬೇಜವಾಬ್ದಾರಿಯನ್ನು ತೋರಿರುವುದು ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿರುವುದು ಸಾರ್ವಜನಿಕ ಹಣ ಖರ್ಚು ಮಾಡುವಲ್ಲಿ ಸರ್ಕಾರದ ಮಾರ್ಗ ಸೂಚಿಗಳನ್ನು ಅಥವಾ ಉದ್ದೇಶಗಳನ್ನು ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುತ್ತದೆ. ಅವರ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷತನದ ಕಾರಣದಿಂದ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿರುವುದು ದೃಢಪಟ್ಟಿರುತ್ತದೆ