ಪಿಂಚಣಿ ಸೌಲಭ್ಯ ಅಧಿವೇಶನದಲ್ಲಿ ಚರ್ಚಿನಲು ಒತ್ತಾಯ

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ

ರಾಯಚೂರು ನೆ 20- ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವನ್ನು ಅಧಿವೇಶನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಚರ್ಚಿನಲು ಕರ್ನಾಟಕ ರಾಜ್ಯ ಅನುದಾನ ನೌಕರರ ಸಂಘದ ಜಿಲ್ಲಾಧ್ಯಕ್ಷ ಹರ್ಷವರ್ಧನ್ ಅವರು ಹೇಳಿದರು .
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ,
2006ರ ನಂತರ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ಬಡ್ತಿ ಹೊಂದಿದ ಶಿಕ್ಷಕರಿಗೆ ಕೇವಲ ವೇತನ ಮಾತ್ರ ದೊರೆಯುತ್ತಿದ್ದು , ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಯಾವುದೇ ಪಿಂಚಣಿ ಸೌಲಭ್ಯ ಇರುವುದಿಲ್ಲ.ಪಿಂಚಣಿ ಸೌಲಭ್ಯ ದೊರೆಯದೇ ಈಗಾಗಲೇ ಸುಮಾರು 2 ಸಾವಿರಕ್ಕೂ ಹೆಚ್ಚು ನೌಕರರು ಕೊನೆ ಸಂಬಳ ಮಾತ್ರ ಪಡೆದು,ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ.
ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕ ಮರಣ ಹೊಂದಿದ್ದಾರೆ.ಆದರೆ ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆಯುತ್ತಿಲ್ಲ.ನೌಕರರು ವೇತನ ಅನುದಾನಕ್ಕೆ ಒಳಪಡುವುದಕ್ಕೂ ಪೂರ್ವದ ಸೇವೆಗೆ ಸೇರಿದ ದಿನದಿಂದಲೇ ನ್ಯಾಯಾಲಯವೇ ತೀರ್ಪು ನೀಡಿದರೂ,ಸರ್ಕಾರ ಮಾತ್ರ ಬೇಡಿಕೆ ಈಡೇರಿಸುತ್ತಿಲ್ಲ 2006 ಕ್ಕೂ ಮೊದಲು ಅನುದಾನ ರಹಿತ ಶಾಲೆಗಳಿಗೆ ಶಿಕ್ಷಕರಾಗಿ ನೇಮಕಗೊಂಡವರಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿದೆ . ಕಳೆದ ವರ್ಷ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ 21 ದಿನ ಅಹೋರಾತ್ರಿ ಧರಣಿ ನಮ್ಮ ಸಂಘದ ವತಿಯಿಂದ ನಡೆಸಲಾಯಿತು . ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸರ್ಕಾರಕ್ಕೆ ಈ ವಿಷಯದ ಬಗ್ಗೆ ತಿಳಿಸಲಾಗುತ್ತದೆಂದು ಹೇಳಿದ್ದರು . ಆದರೆ ಇಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಚಾಲ್ತಿಯಲ್ಲಿರುವುದರಿಂದ ಮುಖ್ಯಮಂತ್ರಿಗಳು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಪಿಂಚಣಿ ಸೌಲಭ್ಯವನ್ನು ನೀಡಬೇಕು ನಮ್ಮ ಶಿಕ್ಷಕರಿಗೆ ಸರ್ಕಾರದಿಂದ ದೊರೆಯುವ ಜ್ಯೋತಿ ಸಂಜೀವಿನಿ ಯೋಜನೆ ಇರುವುದಿಲ್ಲ .
ಇದು ಕೇವಲ ಸರ್ಕಾರಿ ಶಿಕ್ಷಕರಿಗೆ ಮಾತ್ರ ಅನ್ವಯಿಸುತ್ತದೆ ಆದ ಕಾರಣ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಅನ್ವಯಿಸಿ , ಪಿಂಚಣಿ ಸೌಲಭ್ಯವನ್ನು ಒದಗಿಸಬೇಕೆಂದು ಜಿಲ್ಲೆಯ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಚರ್ಚೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುರಳಿಧರ ಕುಲಕರ್ಣಿ,ಕಲ್ಲಪ್ಪ,ವೆಂಕಟೇಶ,ಬಸವರಾಜ,ಬಸವನಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share and Enjoy !

Shares