ಅತಿಥಿ ಉಪನ್ಯಾಸಕರು : ಸೆ.23 ರಂದು ರಾಜ್ಯಾದ್ಯಂತ ಪ್ರತಿಭಟನೆ

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ
ರಾಯಚೂರು: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆ.23 ರಂದು ರಾಜ್ಯಾದ್ಯಂತ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆಂದು ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಮುಖಂಡರಾದ ಚನ್ನಬಸವ ಜಾನೇಕಲ್ ಅವರು ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14 ಸಾವಿರದ 564 ಅತಿಥಿ ಉಪನ್ಯಾಸಕರು ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ನಮಗೆ ಕೆಲಸಕ್ಕೆ ಭದ್ರತೆಯಿಲ್ಲ. ಲಾಕ್‌ಡೌನ್ ಸಮಯದಲ್ಲಿ ಸ್ವತಃ ನಮ್ಮ ಖರ್ಚಿನಲ್ಲಿ ಆನ್‌ಲೈನ್ ತರಗತಿಯನ್ನು ನಡೆಸಿದ್ದೇವೆ. ಯುಜಿಸಿಯು ಮಾರ್ಚ್ 24 ರಿಂದ ಜುಲೈ 31 ರ ವೆರೆಗೆ ಅವಧಿಯನ್ನು ಸೇವೆಯಿಂದ ಪರಿಗಣಿಸಿ ವೇತನ ನೀಡಬೇಕೆಂದು ನಿರ್ದೇಶನ ನೀಡಿದೆ. ಆದರೆ ಸರ್ಕಾರ ಈ ವಿಷಯದ ಬಗ್ಗೆ ಮೌನವಹಿಸಿದೆ.
ಕೋವಿಡ್-19 ನಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆಗಳು ಉಲ್ಬಣಗೊಂಡಿದೆ ಇತ್ತೀಚಿಗೆ ಆರ್ಥಿಕ ಮುಗ್ಗಟ್ಟಿನಿಂದ ಹಲವು ಜನ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕುರು ಆತ್ಮಹತ್ಯೆ ಮಾಡಿಕೊಂಡಿರುವ ಘಟನಗಳು ಬೆಳಕಿಗೆ ಬಂದಿವೆ. ಆದಕಾರಣ ಸರ್ಕಾರ ಕೂಡಲೇ ನಮ್ಮ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ ಯಾವುದೇ ಕಾರಣಕ್ಕೂ ಸೇವೆಯಿಂದ ವಜಾಗೊಳಿಸಬಾರದು. ಬಾಕಿಯಿರುವ ವೇತನವನನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಸೆ.23 ರಂದು ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಹನುಮಂತ ಗೋರವರ್‌ಕುರ್ಡಿ, ಹನುಮಂತ ನಿಲುವಂಜಿ, ಡಾ.ರಂಗನಾಥ, ಕೃಷ್ಣ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share and Enjoy !

Shares