ವೇತನ ಪಾವತಿಗೆ ವಸತಿ ನಿಲಯ ಕಾರ್ಮಿಕರ ಒತ್ತಾಯ

ವಿಜಯನಗರ ವಾಣಿ
ರಾಯಚೂರು.ಸೆ.೨೧- ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನ ಮತ್ತು ಲಾಕ್ ಡೌನ್ ನಂತರದ ವೇತನವನ್ನು ಶೀಘ್ರವೇ ಪಾವತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಸುಮಾರು ವರ್ಷಗಳಿಂದ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ಹಿನ್ನೆಲೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ವಸತಿ ನಿಲಯ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯ ವೇತನ ಮತ್ತು ಜೂನ್ ತಿಂಗಳದ ನಂತರದ ವೇತನವನ್ನು ಸರ್ಕಾರ ಕೂಡಲೇ ಪಾವತಿ ಮಾಡಬೇಕೆಂದು ಒತ್ತಾಯಿಸಿದರು.
ಆದ್ದರಿಂದ ಸರ್ಕಾರ ಕೂಡಲೇ ವಸತಿ ನಿಲಯ ಕಾರ್ಮಿಕರ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸೆ.೨೫ ರಂದು ರಾಜ್ಯ ಮಟ್ಟದ ಬೃಹತ್ ಬೆಂಗಳೂರು ಚಲೋ ಚಳುಯನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕ ಮಹೇಶ್ ಸಿ, ಹಾಗೂ ವಸತಿ ನಿಲಯ ಕಾರ್ಮಿಕರು ಇದ್ದರು.

Share and Enjoy !

Shares