ಐಕ್ಯ ಹೋರಾಟ ಸಮಿತಿಯ ಪ್ರತಿಭಟನೆಗೆ ಶಾಸಕ ಭೀಮಾನಾಯ್ಕ ಬೆಂಬಲ

Share and Enjoy !

Shares
Listen to this article

 

ವಿಜಯನಗರವಾಣಿ ಸುದ್ದಿ
ಬಳ್ಳಾರಿ ಜಿಲ್ಲೆ:

ಹಗರಿಬೊಮ್ಮನಹಳ್ಳಿ :ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ಮಸೂದೆಗಳನ್ನು ವಿರೋಧಿಸಿ ನಡೆಯುತ್ತಿರುವ ಸೆ.28ರ ಐಕ್ಯ ಹೋರಾಟದ ಪ್ರತಿಭಟನೆಗೆ ನನ್ನ ಬೆಂಬಲವಿದೆ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ಶಾಸಕ ಎಸ್.ಭೀಮಾನಾಯ್ಕ ತಿಳಿಸಿದ್ದಾರೆ.ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ದುಡಿಯುವ ವರ್ಗವನ್ನೇ ನಾಶ ಮಾಡಲು ಹೊರಟಿವೆ. ಬಂಡವಾಳಶಾಹಿಗಳ ಗುಲಾಮರಂತೆ ವರ್ತಿಸುತ್ತಿರುವುದು ಖಂಡನೀಯ. ರೈತಾಪಿ ವರ್ಗ, ಕಾರ್ಮಿಕ ವರ್ಗಕ್ಕೆ ಗುರಿಯಾಗಿಸಿ ಅನೇಕ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುವ ಹುನ್ನಾರ ನಡೆಸಿದೆ. ಸರ್ಕಾರಗಳು ತಪ್ಪಿಗೆ ಪ್ರಾಯಶ್ಚಿತ ಪಡುವ ಕಾಲ ದೂರವಿಲ್ಲ ಎಂದು ದೂರಿದರು.ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿಯ ಕರೆಗೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಸಂಘಟನೆಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

 

Share and Enjoy !

Shares