ನಾಳೆ ನಡೆಯಲಿರುವ ಬಂದ್ ಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದಬೆಂಬಲ :ಪಂಪನಗೌಡ ಬಾದರ್ಲಿ

 

 

ವಿಜಯನಗರವಾಣಿ ಸುದ್ದಿ:
ರಾಯಚೂರು ಜಿಲ್ಲೆ

ಸಿಂಧನೂರು: ನಾಳೆನಡೆಯಲಿರುವ ಬಂದ್ ಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ
ಬೆಂಬಲ ಸೂಚಿಸಲಾಗಿದೆ ಎಂದು ಗ್ರಾಮೀಣ ಬ್ಲಾಕ್
ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಂಪನಗೌಡ ಬಾದರ್ಲಿ ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ‌ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು
ಎಂದು ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮಿತಿ.ಪ್ರಗತಿಪರ ಸಂಘಟನೆಗಳು.ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ರಂದು ಹಮ್ಮಿಕೊಂಡಿರುವ ಕರ್ನಾಟಕ ಬಂದ್ ಗೆ ನಗರ ಬ್ಲಾಕ್ ಮತ್ತು ಗ್ರಾಮೀಣ ಕಾಂಗ್ರೆಸ್ ಸಮಿತಿ ಬೆಂಬಲ ಸೂಚಿಸಲಾಗಿದೆ.
ಈ ಹೋರಾಟದಲ್ಲಿ ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾ ಪಂಚಾಯತ ಸದಸ್ಯರಾದ ಬಸವರಾಜ ಹಿರೇಗೌಡ,ಬಾಬುಗೌಡ ಬಾದರ್ಲಿ, ಸೇರಿದಂತೆ ನಗರ ಸಭೆ ಸದಸ್ಯರು. ತಾಲೂಕು ಪಂಚಾಯತಿ ಸದಸ್ಯರು. ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು.ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Share and Enjoy !

Shares