ವಿಜಯನಗರವಾಣಿ ಸುದ್ದಿ
ಕೊಪ್ಪಳ ಜಿಲ್ಲೆ
ಕಾರಟಗಿ: ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ತಾಲೂಕುಗಳಲ್ಲಿ ಅಕ್ರಮ ಮತ್ತು ಅನೈತಿಕ ಚಟಿವಟಿಕೆಗಳ ವಿರುದ್ಧ ಶಿಸ್ತು ಕ್ರಮವಹಿಸುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಪೋಲಿಸ್ ವರಿಷ್ಠಾದೀಕಾರಿ ಟಿ. ಶ್ರೀಧರ್ ಅವರಿಂದ ಸೂಚನೆ ಕಾರಟಗಿ
ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು
ಇತ್ತೀಚಿಗಷ್ಟೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಅರಿಯಲು ಹಾಗೂ ವಿವಿಧ ಠಾಣಾ ಅಧಿಕಾರಿಗಳ ಜೊತೆ ಸಮಾಲೋಚಿಸಲು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಭೇಟಿ ನೀಡುತ್ತಿದ್ದೇನೆ. ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳ ಪರಿಸ್ಥಿತಿಗಳ ಸಂಪೂರ್ಣ ಮಾಹಿತಿ ಪಡೆದ ಬಳಿಕ ಕಾರ್ಯಾಚರಣೆಗೆ ಇಳಿಯಲಾಗುವುದು. ಮರಳು ಹಾಗೂ ಮದ್ಯ ಅಕ್ರಮ ಸಾಗಾಟ, ಜೂಜಾಟ ಮತ್ತು ಮಟ್ಕಾ ಸೇರಿ ಇತರೆ ಅನೈತಿಕ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗುವುದು. ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರ ಸಹಕಾರ ಅತಿಮುಖ್ಯ ಎಂದರು. ಡಿವೈಎಸ್ಪಿ ರುದ್ರೇಶ ಎಸ್. ಉಜ್ಜನಕೊಪ್ಪ, ಸಿಪಿಐ ಉದಯ ರವಿ, ಪಿಎಸ್ಐ ಅವಿನಾಶ ಕಾಂಬಳೆ ಉಪಸ್ಥಿತರಿದ್ದರು.
—