ವಿಜಯನಗರವಾಣಿ ಸುದ್ದಿ
ಬಳ್ಳಾರಿ ಜಿಲ್ಲೆ
ಸಿರುಗುಪ್ಪ : ತಾಲೂಕಿನ ಬೈರಾಪುರ ಗ್ರಾಮದಲ್ಲಿ ಸಿಡಿಲಿಗೆ ಇಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ
ಗ್ರಾಮದ ಕವಿತಾ (32), ಗಂಗಮ್ಮ (45) ಮೆಣಸಿನಕಾಯಿ ಹೊಲದಲ್ಲಿ ಕಳೆ ಕೀಳಲು ಹೋದಾಗ ಸಿಡಿಲು ಬಡೆದ ಪರಿಣಾಮ
ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂದಿಸಿತೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ದಾವಿಸಿ ಮೃತ ಮಹಿಳೆಯರನ್ನು ಅಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಿದರು, ಸ್ಥಳಕ್ಕೆ ತಹಸೀಲ್ದಾರ್ ಎಸ್.ಬಿ.ಕೂಡಲಗಿ, ಸಿಪಿಐ ಕಾಳಿಕೃಷ್ಣ, ಪಿಎಸ್‌ಐ ಅಮರೇಗೌಡ ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ಸಿರಿಗೇರಿ ಠಾಣೆಯಲ್ಲಿ ದಾಖಲಿಸಿದ್ದಾರೆ.