ಈಚನಾಳ ಗ್ರಾಮದಲ್ಲಿ ಕುರಿ ಮತ್ತು ಮೇಕೆಗಳಿಗೆ ಚಿಕಿತ್ಸೆ ನೀಡುವಲ್ಲಿ ಪಶು ವೈದ್ಯ, ಸಿಬ್ಬಂದಿ ನಿರ್ಲಕ್ಷ್ಯ ವಿರೋಧಿಸಿ ಕುರಿಗಾಹಿಗಳು ಪ್ರತಿಭಟನೆ ನಡೆಸಿದರು.

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ

ರಾಯಚೂರು ಜಿಲ್ಲೆ

ಲಿಂಗಸೂಗೂರು: ತಾಲ್ಲೂಕಿನ ಈಚನಾಳ ಗ್ರಾಮದಲ್ಲಿ ಹದಿನೈದು ದಿನಗಳಿಂದ ನಿರಂತರ ಮಳೆಗೆ ಕಾಲು ಬೇನೆ ಹಾಗೂ ಅತಿಯಾದ ತಂಪಿಗೆ ಕುರಿ, ಮೇಕೆಗಳು ಸಾವನ್ನಪ್ಪುತ್ತಿವೆ. ಈ ಕುರಿತು ವೈದ್ಯರಿಗೆ ಮಾಹಿತಿ ನೀಡದರು ಗ್ರಾಮೀಣ ಪ್ರದೇಶಗಳಿಗೆ ಆಗಮಿಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ಈಚನಾಳ ಸುತ್ತಮುತ್ತ ೪೦ಕ್ಕೂ ಹೆಚ್ಚು ಕುರಿ, ಮೇಕೆ ಸಾವನ್ನಪ್ಪಿವೆ. ರೋಗಕ್ಕೆ ಚಿಕಿತ್ಸೆ ನೀಡುತ್ತಿಲ್ಲ.ಸಾಕಷ್ಟು ಬಾರಿ ಮನವಿ ಮಾಡಿದರು ಪ್ರಯೋಜನ ಅಗದ್ದರಿಂದ ಸತ್ತ ಕುರಿ, ಮೇಕೆ ಸಮೇತ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ರೈತ ಮುಖಂಡರ ನೇತೃತ್ವದಲ್ಲಿ ೩ ಗಂಟೆ ಜನನ ಕಾಲ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರು.
ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಚಪ್ಪ ಮಾತನಾಡಿ, ಯಾವುದಾದರು ಯೋಜನೆಯಡಿ ಪರಿಹಾರ ಕೊಡಿಸುವ ಯತ್ನ ಮಾಡುವೆ. ವೈದ್ಯ, ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವೆ ಎಂದು ಸಮಾಧಾನ ಪಡಿಸಿದ್ದದಾರೆ.

Share and Enjoy !

Shares