ಮುದಗಲ್ಲ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Share and Enjoy !

Shares
Listen to this article

 

ವಿಜಯನಗರವಾಣಿ ಸುದ್ದಿ

ರಾಯಚೂರು ಜಿಲ್ಲೆ

ಲಿಂಗಸೂಗೂರು ತಾಲ್ಲೂಕಿನ ಮುದಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿತ್ತು. ಒಟ್ಟು ೨೩ ಸದಸ್ಯ ಸಂಖ್ಯಾಬಲದಲ್ಲಿ ಕಾಂಗ್ರೆಸ್ ೧೪ ಸದಸ್ಯ ಬಲದ ಮೂಲಕ ಬಹುಮತ ಪಕ್ಷವಾಗಿ ಹೊರ ಹೊಮ್ಮಿತ್ತು.
ಶುಕ್ರವಾರ ಶಾಸಕ ಡಿ.ಎಸ್ ಹೂಲಗೇರಿ ನೇತೃತ್ವದಲ್ಲಿ ಸರ್ವ ಸದಸ್ಯರು ಒಮ್ಮತದ ಮೂಲಕ ೨೧ನೇ ವಾರ್ಡ್ ಅಮೀನಾ ಬೇಗಂ ಬಾರಿಗಿಡದ, ಉಪಾಧ್ಯಕ್ಷ ಸ್ಥಾನಕ್ಕೆ ಶಿವಗ್ಯಾನಪ್ಪ ರನ್ನ ಅವರನ್ನು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಒಮ್ಮತ ಸೂಚಿಸಿದರು.
ಅವಿರೋಧ ಆಯ್ಕೆ: ಪುರಸಭೆ ಚುನಾವಣಾ ಕಚೇರಿಗೆ ಸೂಚಕ, ಅನುಮೋದಕರ ಸಹಯೋಗದಲ್ಲಿ ಆಗಮಿಸಿ ಅಧ್ಯಕ್ಷ ಸ್ಥಾನಕ್ಕೆ ಅಮೀನಾಬೇಗಂ ಬಾರಿಗಿಡದ, ಉಪಾಧ್ಯಕ್ಷ ಸ್ಥಾನಕ್ಕೆ ಶಿಗ್ಯಾನಪ್ಪ ರನ್ನ ನಾಮಪತ್ರ ಸಲ್ಲಿಸಿದರು.
ಚುನಾವಣೆ ಸಭೆ ಆರಂಭಗೊಳ್ಳುತ್ತಿದ್ದಂತೆ ನಾಮಪತ್ರ ಪರಿಶೀಲನೆ ನಡೆಸಿ ಕ್ರಮಬದ್ಧತೆ ಪರಿಶೀಲಿಸಿ, ನಾಮಪತ್ರ ವಾಪಸ್ಸು ಪಡೆಯಲು ಅವಕಾಶ ನೀಡಲಾಗಿತ್ತು. ಸಭೆ ಆರಂಭಗೊಳ್ಳುತ್ತಿದ್ದಂತೆ ಚುನಾವಣಾಧಿಕಾರಿ ಚಾಮರಾಜ ಪಾಟೀಲ್ ಅವಿರೋಧ ಆಯ್ಕೆ ಘೋಷಿಸಿದರು.
ವಿಜಯೋತ್ಸವ: ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಣೆ ಆದೇಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ವಿಜಯೋತ್ಸವ ಆಚರಿಸಿದರು.

Share and Enjoy !

Shares