ವಿಜಯನಗರವಾಣಿ
ರಾಯಚೂರು ಜಿಲ್ಲೆ
ಮಸ್ಕಿ. ಉಪ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವಂತಹ ಮಸ್ಕಿ ಕ್ಷೇತ್ರದ ರಾಜಕೀಯ ಅಖಾಡದಲ್ಲಿ ಬಿಜೆಪಿ ಪರಾಜಿತ ಅಭ್ಯರ್ಥಿ ಆರ್ ಬಸನಗೌಡ ತುರ್ವಿಹಾಳ ಇಂದು ಕೆ ಪಿ ಸಿ ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರನ್ನು ಖಾಸಗಿ ಹೋಟೆಲ್ ಬೇಟಿಯಾಗಿ ಮಾತುಕತೆ ನಡೆಸಿದರು.ಈವರ ನಡೆ ಈಗ ತೀವ್ರ ಕುತೂಹಲ ಕೆರಳಿಸಿದ . ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿದೆ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಸುದ್ದಿ ಹಬ್ಬುತಿದ್ದಂತೆ ಈಗ ಅವರು ಡಿಕೆಶಿ ಬೇಟಿಯಾಗಿ ಮಾತುಕತೆ ನಡೆಸಿದ್ದು ಕಾಂಗ್ರೆಸ್ ಸೇರುವರು ಎನ್ನುವುದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಿದೆ.ಒಂದು ಮೂಲಗಳ ಪ್ರಕಾರ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರುವರು ಬಹುತೇಕ ಖಚಿತವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸೇರ್ಪಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.ಈ ಸಂದರ್ಭದಲ್ಲಿ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.