ಪ್ರತಿಭಟನೆಗೆ ಸೀಮಿತವಾಯ್ತು ಭಾರತ್ ಬಂದ್

Share and Enjoy !

Shares
Listen to this article

 

ವಿಜಯನಗರವಾಣಿ ಸುದ್ದಿ
ಬಳ್ಳಾರಿಜಿಲ್ಲೆ:
ಹಗರಿಬೊಮ್ಮನಹಳ್ಳಿ :ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪಟ್ಟಣದ ಬಸವೇಶ್ವರ ಬಜಾರ್ ಸೇರಿದಂತೆ ನಗರದ ಎಲ್ಲೆಡೆ ಜನಜೀವನ ಯಥಾರೀತಿ ಆರಂಭಗೊಂಡಿತ್ತು. ಬೀದಿಬದಿ ವ್ಯಾಪಾರಿಗಳು, ಹೋಟೆಲ್‍ಗಳು ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಬಸ್ ಹಾಗೂ ಆಟೋಗಳು ಎಂದಿನಂತೆ ರಸ್ತೆಗಿಳಿದಿದ್ದು ಕಂಡುಬಂತುಅಖಿಲ ಭಾರತ ರೈತ ಸಮನ್ವಯ ಸಂಘರ್ಷ ಸಮಿತಿ, ಸಿಪಿಐಎಂ, ಎಸ್‍ಎಫ್‍ಐ, ಗ್ರಾಕೂಸ್, ಜನವಾದಿ ಮಹಿಳಾ ಸಂಘಟನೆ ಹಾಗೂ ಕರವೇ ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಪಟ್ಟಣದ ಈಶ್ವರ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ರ್ಯಾಲಿ ನಡೆಸಿದರು.ಇದಕ್ಕೂ ಮುನ್ನ ಕರವೇ (ಶಿವರಾಮೇಗೌಡ ಬಣ) ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಮತ್ತು ಕರವೇ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಎನ್.ಎಮ್.ಗೌಸ್ ನೇತೃತ್ವದಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರದ ರೈತ ನೀತಿಗಳನ್ನು ವಿರೋಧಿಸಿ ಘೋಷಣೆಗಳನ್ನು ಕೂಗತ್ತಾ ಬೈಕ್ ರ್ಯಾಲಿ ನಡೆಸಿದರು.

Share and Enjoy !

Shares