ಚುನಾವಣಾ ಕರ್ತವ್ಯಕ್ಕೆ ಗೈರು: ಕಾರಣ ಕೇಳಿ ನೋಟಿ

 

ರಾಏಎಯಚೂರು;ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ನಿಯುಕ್ತಿಗೊಳಿಸಿದ್ದ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಇರುವ 78 ಜನರಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಕಾರಣವನ್ನು ಪಡೆದು ವರದಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.
ಚುನಾವಣಾ ಕರ್ತವ್ಯಕ್ಕೆ ನಿಯುಕ್ತಿಗೊಳಿಸಿ ಪಿಎಆರ್, ಎಪಿಆರ್‍ಓ, ಪಿಓಗಳಿಗೆ ಮಾಹಿತಿಯನ್ನು ರವಾನಿಸಲಾಗಿತ್ತು. ಮಸ್ಟರಿಂಗ್ ಕೇಂದ್ರದಲ್ಲಿ ಹಾಜರಾಗುವಂತೆ ತಿಳಿಸಿದ್ದರೂ 78 ಸಿಬ್ಬಂದಿಗಳು ಚುನಾವಣಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ, ಮೊಬೈಲ್ ಬಂದ್ ಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗದೇ ಕರ್ತವ್ಯ ಲೋಪ ಎಸಗಿದ್ದನ್ನು ಗಂಭಿರವಾಗಿ ಪರಿಗಣಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ)1993 ರ 308(ಡಿ) ಅಡಿ ನೋಟಿಸ್ ಜಾರಿಗೊಳಿಸಲಾಗಿದೆ. 24 ಗಂಟೆಯೊಳಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ.

Share and Enjoy !

Shares