ವಿಜಯನಗರವಾಣಿ ಸುದ್ದಿ
ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತಿಗಳ ಚುನಾವಣಾ ಫಲಿತಾಂಶದ ನಂತರ ರಾಜ್ಯ ಚುನಾವಣಾ ಆಯೋಗವು ರಾಜ್ಯದ 5,956 ಗ್ರಾಮ ಪಂಚಾಯ್ತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬ) ಮತ್ತು ಸಾಮಾನ್ಯ ವರ್ಗಗಳಗೆ ಹಾಗೂ ಈ ಪ್ರವರ್ಗಗಳಲ್ಲಿ ಮಹಿಳೆಯರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಗಳನ್ನು, ನಿಗದಿ ಪಡಿಸಿ, ರಾಜ್ಯ ಚುನಾವಣಾ ಆಯೋಗ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಈ ಕುರಿತಂತೆ ಗೆಜೆಟ್ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹುದ್ದೆಗಳನ್ನು ಆಯಾಯ ತಾಲೂಕಿನ ಜನಸಂಖ್ಯೆಯ ಆಧಾರದ ಮೇಲೆ ನಿಗದಿ ಪಡಿಸಿದೆ. 2020ನೇ ಸಾಲಿನ ಚುನಾವಣೆ ಮುಗಿದ ನಂತರ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ.