ವಿಜಯನಗರವಾಣಿ
ಬಳ್ಳಾರಿ ಜಿಲ್ಲೆ
ಕುರುಗೋಡು:ತಾಲೂಕು ಯೂಥ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಟ್ಟಣದ ಕೆ. ಗಾಧಿಲಿಂಗಪ್ಪ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯೂಥ್ ಅಧ್ಯಕ್ಷ ಸ್ಥಾನಕ್ಕೆ ಗಾಧಿಲಿಂಗಪ್ಪ ಒಬ್ವರೇ ಕಡೆಯಿಂದ ನಾಮ ಪತ್ರ ಬಂದಿರುವುದರಿಂದ ಕೆ ಗಾಧಿಲಿಂಗಪ್ಪ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕ್ಷೇತ್ರದ ಶಾಸಕ ಜೆ. ಎನ್. ಗಣೇಶ್ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಾಧಿಲಿಂಗಪ್ಪ ಮಾತನಾಡಿ, ಪಕ್ಷ ನನ್ನ ಮೇಲೆ ವಿಶ್ವಾಸ ಹಿಟ್ಟು ಶಾಸಕರು, ಮುಖಂಡರು, ಕಾರ್ಯಕರ್ತರು ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆ ಮಾಡಿ ಜವಾಬ್ದಾರಿ ಯನ್ನು ವಹಿಸಿದ್ದಾರೆ. ಅದರಂತೆ ಪಕ್ಷದ ನಿಯಮಗಳಿಗೆ ಬದ್ಧನಾಗಿ ಎಲರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲವರ್ಧನೆ ಗೊಳಿಸಲು ಶ್ರಮಿಸುತ್ತೇನೆ ಎಂದರು.