ಸಂಸದ ರಾಜಾ ಅಮರೇಶ್ವರ ನಾಯಕಗೆ ಕೊರೊನಾ; ಆಸ್ಪತ್ರೆಗೆ ದಾಖಲು

ವಿಜಯನಗರವಾಣಿ
ರಾಯಚೂರು ಜಿಲ್ಲೆ

ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆಗೆ ನೀಡಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಹಿನ್ನೆಲೆ ಕೂಡಲೇ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ರಾಯಚೂರು: ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ದೃಢಪಟ್ಟ ಹಿನ್ನೆಲೆ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಐಸೋಲೋಷನ್ ವಾರ್ಡ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆಗೆ ನೀಡಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಹಿನ್ನೆಲೆ ಕೂಡಲೇ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಕುರಿತು ಈಟಿವಿ ಭಾರತ್​ಗೆ ದೂರವಾಣಿ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಸಿಎಂಗೆ ಕೊರೊನಾ ಆತಂಕ:
ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಸೋಂಕು ತಾಗಿರುವುದು ದೃಢಪಟ್ಟಿರುವುದರಿಂದ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳಿಗೀಗ ಕೊರೊನಾ ಭೀತಿ ಶುರುವಾಗಿದೆ. ಯಾದಗಿರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಭಾಗಿಯಾಗಿದ್ದು, ಕೆಲ ದಿನಗಳಲ್ಲೇ ಕೊರೊನಾ ಪಾಸಿಟಿವ್ ವರದಿ ಬಂದಿರುವುದರಿಂದ ಇತರರಿಗೆ ಆತಂಕ ಎದುರಾಗಿದೆ

Share and Enjoy !

Shares