ರಾಯಚೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ರಾಯಚೂರು ತಾಲೂಕು ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಮಹಿಳಾ ಕಾಯಕೋತ್ಸವ ಅಭಿಯಾನಕ್ಕೆ ಜ.15ರ ಶುಕ್ರವಾರ ತಾಲೂಕಿನ ಸಿಂಗನೋಡಿ ಗ್ರಾಮ ಪಂಚಾಯತಿನಲ್ಲಿ ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್ ಅವರು ಚಾಲನೆ ನೀಡಿದರು.
ಈ ಅಭಿಯಾನವು ಜ.15ರಿಂದ ಮಾರ್ಚ್ 15ರ ವರೆಗೆ ನಡೆಯಲಿದೆ. ಗ್ರಾಮದ ಮನೆ ಮನೆಗೆ ಭೇಟಿ ನೀಡಿ, ನರೇಗಾ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಫಾರಂ 6 ಬಳಸಿಕೊಳ್ಳುವಂತೆ ಸೂಚಿಸಿದರು. ನರೇಗಾ ಯೋಜನೆಯಲ್ಲಿ ಮಹಿಳೆಯರು ಹೆಚ್ಚು ಹೆಚ್ಚಾಗಿ ಭಾಗವಹಿಸಿ ಆರ್ಥಿಕವಾಗಿ ಸ್ವಾವಲಂಭಿ ಜೀವನ ನಡೆಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಂದರ್ಭದಲ್ಲಿ ಕರೆ ನೀಡಿದರು.
ಮೊದಲನೇ ಹಂತದ ಈ ಅಭಿಯಾನವು ತಾಲೂಕಿನ ಸಿಂಗನೋಡಿ, ಎಲ್.ಕೆ.ದೊಡ್ಡಿ, ಕಲ್ಮಲಾ ಹಾಗೂ ಯಾಪಲದಿನ್ನಿ ಗ್ರಾಮ ಪಂಚಾಯತ್‍ಗಳಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಜಿಲ್ಲಾ ಮತ್ತು ತಾಲೂಕು ಐಇಸಿ ಸಂಯೋಜಕರು, ಸಮೀಕ್ಷೆ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.