21ರಂದು ಅಂಬಿಗರ ಚೌಡಯ್ಯ ಜಯಂತಿ

ರಾಯಚೂರು: ಜನವರಿ 21ರಂದು ಬೆಳಿಗ್ಗೆ 8:30ಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಗಂಗಾಮತಸ್ಥ ಸಮಾಜದ ಕಾರ್ಯದರ್ಶಿ ಕಡಗೋಳ ಶರಣಪ್ಪ ಹೇಳಿದರು.
ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗದ ಕಾರಣ ಈ ಬಾರಿಯ ಜಯಂತಿಯನ್ನು ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಚೌಡಯ್ಯ ಮೂರ್ತಿಗೆ ಪೂಜೆ, ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಿಲ್ಲೇ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ ಮತ್ತು ಸೋಮವಾರ ಪೇಟೆ ಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಮಹಾಸ್ವಾಮಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಭಾಗದ ಸಮಾಜದ ಮುಖಂಡರು ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗವಹಿಸದೇ ತಮ್ಮ ಗ್ರಾಮ ಹಾಗೂ ಪಟ್ಟಣಗಳಲ್ಲೆ ಆಚರಿಸಬೇಕು. ಈ ವೇಳೆ ಮಾಸ್ಕ್, ವೈಯಕ್ತಿಕ ಅಂತರ ಹಾಗೂ ಇತರೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಸಮಾಜದ ಮುಖಂಡ ಕಡಗೋಳ ಅಂಜನೇಯ, ನಗರಸಭೆ ಸದಸ್ಯ ಜಿಂದಪ್ಪ, ಕಲ್ಮಲಾ ಶರಣಪ್ಪ, ಎಪಿಎಂಸಿ ಕಾರ್ಯದರ್ಶಿ ರಂಗನಾಥ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Share and Enjoy !

Shares