ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧ : ಸೋಮನಗೌಡ ಪಾಟೀಲ್.

Share and Enjoy !

Shares
Listen to this article

ವಿಜಯನಗರವಾಣಿ
ರಾಯಚೂರು ಜಿಲ್ಲೆ

ಲಿಂಗಸೂಗೂರು .ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿಕೊಡಲಾ ಗುವುದು ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸೋಮನಗೌಡ ಪಾಟೀಲ್ ಲೆಕ್ಕಿಹಾಳ ಹೇಳಿದರು.
ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ನಾಗರಾಳ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು
ಶೌಚಾಲಯ, ಕುಡಿಯುವ ನೀರು, ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ, ಆಟದ ಮೈದಾನ ಸೇರಿ ಮಕ್ಕಳ ಹಕ್ಕುಗಳ ರಕ್ಷಣೆ ಜೊತೆಗೆ ಶಾಲೆಗಳ ಅಭಿವೃದ್ಧಿ ಆದ್ಯತೆ ನೀಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಗೌರಮ್ಮ, ಹೇಮಯ್ಯ, ಚನ್ನಬಸಪ್ಪ ಅಂಗಡಿ, ಪ್ರಭಾಕರ, ಗದ್ದೆಪ್ಪ, ಚಂದ್ರ ಶೇಖರ ಗಡೇದ, ಸುರೇಖಾ ಸೇರಿದಂತೆ ಶಾಲೆ ಮಕ್ಕಳು ಇದ್ದರು.

Share and Enjoy !

Shares