ವಿಜಯನಗರವಾಣಿ
ರಾಯಚೂರು: ಜಿಲ್ಲೆ
ಲಿಂಗಸುಗೂರು: ತಾಲೂಕಿನ ರೋಡಲಬಂಡಾ ಕ್ರಾಸ್ ಬಳಿ ಬೈಕ್ ಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಕೂಲಿ ಕಾರ್ಮಿಕರಿದ್ದ ಟಾಟಾ ಏಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪರಸ್ಥಿತಿ ಚಿಂತಾಜನಕವಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಸೇರಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯ ಕಂದಕಕ್ಕೆ ಉರುಳಿ ಬಿದ್ದಿದೆ. ಕೃಷಿ ಕೂಲಿ ಕೆಲಸಕ್ಕೆ ಹೊರಟಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಕಂದಕ ಆಳವಿದ್ದರೂ ಒಂದೇ ಬಾರಿ ಪಲ್ಟಿ ಹೊಡೆದಿದ್ದರಿಂದ ಅನಾಹುತ ತಪ್ಪಿದೆ.
ಗಾಯಾಳುಗಳನ್ನ ಲಿಂಗಸುಗೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.ಹಟ್ಟಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.