ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ:ಮನವಿ

Share and Enjoy !

Shares

ರಾಯಚೂರು,ಫೆ.೨- ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಜಿಲ್ಲಾಧಿಕಾರಿಗಳ ಮೂಲಕ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಇರುವ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ತಡೆಗಟ್ಟಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ರಾಯಚೂರಿನ ಪದವಿ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದರೂ ಕೂಡ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಇದನ್ನು ಸರಿಪಡಿಸಲು ವಿಶ್ವವಿದ್ಯಾಲಯದಲ್ಲಿ ಹಣ ವಸೂಲಿ ಮಾಡುತ್ತಿರುವ ಅಂಶವು ಬಾರಿ ಆಘಾತವನ್ನುಂಟು ಮಾಡಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಅಂಕಗಳನ್ನು ಹೆಚ್ಚು ಕಡಿಮೆ ಮಾಡುವುದು, ವಿದ್ಯಾರ್ಥಿ ಹೆಸರನ್ನು ಬದಲಾಯಿಸುವುದು, ಘಟಿಕೋತ್ಸವ ಪ್ರಮಾಣಪತ್ರವನ್ನು ಸರಿಯಾದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸದೆ ಇರುವುದು ಸೇರಿದಂತೆ ಮುಂತಾದ ರೀತಿಯಲ್ಲಿ ವಿದ್ಯಾರ್ಥಿಗಳು ತೀವ್ರ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಇದನ್ನು ಸರಿಪಡಿಸಲು ವಿದ್ಯಾರ್ಥಿಗಳು ಮುಂದಾದಾಗ ಹಣ ಕೇಳುವ ದಂಧೆ ನಡೆಯುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಹೇಗಾದರೂ ಹಣ ಸಂಗ್ರಹಿಸುವ ಮಟ್ಟಕ್ಕೆ ವಿಶ್ವವಿದ್ಯಾಲಯವು ಇಳಿದಿರುವುದು ಅತ್ಯಂತ ವಿಷಾದನೀಯ, ಇದು ವಿಶ್ವವಿದ್ಯಾಲಯದ ಪಾವಿತ್ರತೆ ಆದ್ದರಿಂದ ಕೂಡಲೇ ಗುಲ್ಬರ್ಗಾ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಹಾಗೂ ಹಣ ವಸೂಲಿ ಮಾಡುವ ದಂಧೆಯ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಐಡಿಎಸ್‌ಒ ಒತ್ತಾಯಿಸುತ್ತದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳು, ಪೋಷಕರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದರು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಪೀರ್ ಸಾಬ್, ಕಾರ್ತಿಕ್, ಮೌನೇಶ್, ಬಸವರಾಜ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Share and Enjoy !

Shares