ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು :ಮುಕ್ಕುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಸಣ್ಣ ಯಶೋದಾ ಆಯ್ಕೆ .ಕಾಂಗ್ರೆಸ್ ಬೆಂಬಲಿತ ಸದಸ್ಯ ರಿಂದ ತೀವ್ರ ಆಕ್ರೋಶ .
ತಾಲ್ಲೂಕಿನ ಮುಕ್ಕುಂದ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಇಂದು ನಡೆಯಿತು .ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸಣ್ಣ ಯಶೋದಾ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪಾಲಾಕ್ಷ ಗೌಡ ಸ್ಪರ್ಧಿ ಸಿದ್ದರು .
ಮುಕುಂದ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾದ ಸಣ್ಣ ಯಶೋದಾ ಆಯ್ಕೆಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು. ಪಂಚಾಯಿತಿಯ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮುಕುಂದ ಗ್ರಾಮ ಪಂಚಾಯಿತಿಗೆ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಲಿತಮ್ಮ ಆಯ್ಕೆಗೊಂಡರು .ಅಧ್ಯಕ್ಷ ಸ್ಥಾನಕ್ಕೆ ನಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಪಾಲಾಕ್ಷಿಗೌಡ ಹಾಕಿಕೊಳ್ಳಬೇಕಿತ್ತು .ಆದರೆ ನ್ಯಾಯಸಮ್ಮತವಾಗಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ ಪಾಲಾಕ್ಷಿ ಗೌಡರನ್ನೇ ಅಧ್ಯಕ್ಷರಾಗಿ ಆಯ್ಕೆ ಮಾಡಬೇಕು ಎಂದು ಪಂಚಾಯಿತಿಯ ಮುಂದೆ ಕಣ್ಣೀರಿಟ್ಟ ಘಟನೆ ನಡೆಯಿತು.