ವಿಜಯನಗರವಾಣಿ
ಹೊಸಪೇಟೆ: ರಾಷ್ಟ್ರೀಯ ಹೆದ್ದಾರಿ-50ರ ಎಂಎಸ್‌ಪಿಎಲ್ ಕ್ರಾಸ್ ಹತ್ತಿರ ಫ್ಲೆöÊ ಓವರ್ ಬಳಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾರು ಚಲಿಸುತ್ತಿದ್ದ ಜೀಪ್‌ಗೆ ಅಪರಿಚಿತ ಲಾರಿ ಬಡಿದು ಬಿಇಒ ಸುನಂದಾ ಸೇರಿದಂತೆ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶನಿವಾರ ರಾತ್ರಿ ಜರುಗಿದೆ.ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೆಲಸದ ನಿಮಿತ್ತ ತರೀಕೆರೆಗೆ ತೆರಳಿದ್ದರು ಎನ್ನಲಾಗಿದೆ. ಕೆಲಸ ಮುಗಿಸಿ ಹೊಸಪೇಟೆಗೆ ಹಿಂದಿರುವಾಗ ಮರಿಯಮ್ಮನಹಳ್ಳಿಗೆ ಸಮೀಪದ ಎಂಎಸ್‌ಪಿಎಲ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರ ಬಳಿ ಮುಂದೆ ಹೋಗುವ ಅಪರಿಚಿತ ವಾಹನ ಅಡ್ಡಾದಿಡ್ಡಿ ಚಲಿಸಿದ ಕಾರಣ ಶಿಕ್ಷಣಾಧಿಕಾರಿಗಳ ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ಪಲ್ಟಿಯಾಗಿದೆ. ಘಟನೆಯ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾರ ಭುಜಕ್ಕೆ ಪೆಟ್ಟಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಜೊತೆ ಇನ್ನು ಮೂವರು ಶಿಕ್ಷಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತದಲ್ಲಿ ಬಿಇಒ ಸುನಂದಾ ಸೇರಿದಂತೆ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳದಲ್ಲಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿ ರಸ್ತೆ ಸಂಚಾರಕ್ಕೆ ತೊಂದರೆಯುAಟಾಗಿತ್ತು, ಕೂಡಲೇ ಸ್ಥಳಕ್ಕೆ ಆಗಮಿಸಿದ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಎಂ. ಶಿವಕುಮಾರ್ ಹಾಗೂ ಸಿಬ್ಬಂದಿಗಳು ಸಂಚಾರ ದಟ್ಟಣೆಯನ್ನು ತೆರವುಗೊಳಿಸಿದರು.