ರಾಜ್ಯ ಸರಕಾರಿ ನೌಕರರ ಸಂಘದಿಂದ : ಫೆ.13ರಿಂದ ಎರಡು ದಿನಗಳ ಕ್ರೀಡಾಕೂಟ.

Share and Enjoy !

Shares

ರಾಯಚೂರು‌ :- ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಂಸ್ಕೃತಿಕ ಫೆ.13 ರಿಂದ ಪ್ರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ ಅವರು ಹೇಳಿದರು.ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಯುವಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ನೌಕರರ ಸಂಘದ ವತಿಯಿಂದ 2020-21ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಂಸ್ಕೃತಿಕ ಸ್ವರ್ಧೆಗಳು ಫೆ.13 ಹಾಗೂ 14 ರಂದು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು ಪ್ರತಿವರ್ಷದಂತೆ ಈ ವರ್ಷವೂ ಸರ್ಕಾರಿ ನೌಕರರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ ಸರ್ಕಾರಿ ನೌಕರರು ಅಟ್ಲಾಂಟಿಕ್, ಫುಟ್ಬಾಲ್, ವಾಲಿಬಾಲ್, ತ್ರೋಬಾಲ್, ಕಬಡ್ಡಿ ,ಟೆನ್ನಿಸ್, ಬ್ಯಾಡ್ಮಿಂಟನ್, ಜಾನಪದ ನೃತ್ಯ,ಶಾಸ್ತ್ರೀಯ ಗಾಯನ, ವಾದ್ಯ,ಕಿರು ನಾಟಕ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸೌದಿ ಅವರು ಉದ್ಘಾಟಿಸಲಿದ್ದು ಅಧ್ಯಕ್ಷತೆಯನ್ನು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲಾ ಶಾಸಕರು ಆಗಮಿಸಲಿದ್ದಾರೆ. ಘನ ಉಪಸ್ಥಿತಿಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಸಿಇಒ ಶೇಖ್ ತನ್ವಿರ್ ಆಸಿಫ್, ಎಸ್.ಪಿ.ನಿಕಮ್ ಪ್ರಕಾಶ್ ಅಮ್ರಿತ್ ಸೇರಿದಂತೆ ಇನ್ನಿತರರು ಆಗಮಿಸಲಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಾಂತೇಶ್ ಬಿರಾದಾರ್, ಚಂದ್ರಶೇಖರ ರೆಡ್ಡಿ, ಪ್ರಸನ್ನ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share and Enjoy !

Shares