ವಿಜಯನಗರವಾಣಿ
ರಾಯಚೂರು ಜಿಲ್ಲೆ
ಲಿಂಗಸೂಗೂರು ಬೃಹದಾಕಾರದ ಮೊಸಳೆಯೊಂದು ರಾತ್ರಿ ವೇಳೆಯಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿದೆ.ತಾಲೂಕಿನ ಬೊಮ್ಮನಾಳ ಗ್ರಾಮದ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಗೋವಿನ ಜೋಳದ ಜಮೀನಿನಲ್ಲಿ ತಡ ರಾತ್ರಿ 10:30 ರ ಸುಮಾರಿಗೆ ಮೊಸಳೆಯೊಂದು ಕಾಣಿಸಿಕೊಂಡಿದೆ. ಇದು ಬೊಮ್ಮನಾಳ ಗ್ರಾಮದ ಪಕ್ಕದಲ್ಲಿರುವ ಬೋಗಾಪುರ ಕೆರೆಯಿಂದ ಆಹಾರ ಹರಸಿ ಬಂದಿರಬಹುದೆಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.ಸದ್ಯಕ್ಕೆ ರಾತ್ರಿ ವೇಳೆಯಲ್ಲಿ ರೈತರು ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ನೀರು ಹರಿಸಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ಜನರಲ್ಲಿ ಮೂಡಿರುವ ಆತಂಕವನ್ನು ದೂರ ಮಾಡಿದರು