ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಂದುಸಾಬ್ ಮುಳ್ಳೂರು ಹೃದಯಾಘಾತದಿಂದ ನಿಧನ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಂದುಸಾಬ್ ಮುಳ್ಳೂರು ಹೃದಯಾಘಾತದಿಂದ ನಿಧನ
ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಂದುಸಾಬ್ ಮುಳ್ಳೂರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ನಗರ ಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪೋಲಿಸ್ ಪಾಟೀಲ್, ಉಪಾಧ್ಯಕ್ಷ
ಮುರ್ತುಜಾಸಾಬ್, ಸೇರಿದಂತೆ ವಿವಿಧ ಪಕ್ಷದ ಮುಖಂಡರು ,ಅಭಿಮಾನಿಗಳು ಹಾಗೂ ಹಿತೈಷಿಗಳು ನಗರದ ಮಹೆಬೂಬ್ ಕಾಲೊನಿ ಯಲ್ಲಿರುವ ಚಂದುಸಾಬ್ ಮುಳ್ಳೂರು ಅವರ ನಿವಾಸಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು .
ಮುಸ್ಲಿಂ ಸಮಾಜದ ಧಾರ್ಮಿಕ ವಿಧಿವಿಧಾನದ ಪ್ರಕಾರ ಮುಳ್ಳೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ

Share and Enjoy !

Shares