ಮಸ್ಕಿ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ.

ರಾಯಚೂರು ಜಿಲ್ಲೆ
ಮಸ್ಕಿ :ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದರು.
ಮಸ್ಕಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀ ರಾಮಲು ಅವರೊಂದಿಗೆ ಆಗಮಿಸಿನಾಮ ಪತ್ರ ಸಲ್ಲಿಸಿದರು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಸಿಡಿ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಪ್ರಕರಣ ತನಿಖೆಯ ಹಂತದಲ್ಲಿದೆ. ಹೀಗಾಗಿ ಈ ಬಗ್ಗೆ ಮಾತನಾಡುವುದಿಲ್ಲ. ನಾವು ಅಭಿವೃದ್ಧಿ ಹಿನ್ನೆಲೆಯಲ್ಲಿ ಮತ ಕೇಳುತ್ತಿದ್ದೇವೆ. ನೂರಕ್ಕೆ ನೂರರಷ್ಟು ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
ಸಿದ್ದರಾಮಯ್ಯ ಸಂಸದರು ಗುಲಾಮರಂತೆ ಎಂದು ಹೇಳಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಹಿರಿಯರಾದ ಸಿದ್ದರಾಮಯ್ಯ ಈ ರೀತಿ ಮಾತನಾಡಬಾರದು.
ಸೋಲಿನ ಹತಾಸಯಿಂದ ಏನನ್ನೂ ಮಾತನಾಡುತ್ತಾರೆ ಎಂದರು.

Share and Enjoy !

Shares