ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸೂಗೂರು: ಕವಿಗಳು ತಮ್ಮ ಕಾವ್ಯದ ಮೂಲಕ ಪರಿಸರ ಜಾಗೃತಿ ಮೂಡಿಸಿ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಬರಹಗಾರರ ಸಂಘದ ತಾಲೂಕಾಧ್ಯಕ್ಷ ದುರ್ಗಾಸಿಂಗ್ ಕರೆ ನೀಡಿದರು.
ಸಿದ್ಧೇಶ್ವರ ಸಾಹಿತ್ಯ ವೇದಿಕೆ ವಿಜಯಪೂರ ಹಾಗೂ ರಾಯಚೂರು ಜಿಲ್ಲಾ ಘಟಕ ವಿಶ್ವ ಭೂಸಂರಕ್ಷಣೆ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಅಂತರ್ಜಾಲ ಕವಿಗೋಷ್ಟಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮನುಷ್ಯ ಪರಿಸರ ನಾಶಗೊಳಿಸುತ್ತಿರುವುದೇ ನೆರೆ, ಬರ, ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗಿ ಮನುಕುಲ ತಲ್ಲಣಗೊಳಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಾನಾಗೌಡ ಮಾಲಿಪಾಟೀಲ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಸಿದ್ಧೇಶ್ವರ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ಶ್ರೀಮತಿ ಗಿರಿಜಾ ಮಾಲಿಪಾಟೀಲ, ರಾಯಚೂರು ಜಿಲ್ಲಾ ಸಂಚಾಲಕ ವಿರೇಶ ಎಸ್. ಎಂ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಾಡ್ಲಗೇರಿ ಉಪಸ್ಥಿತರಿದ್ದರು.
ಸುಮಾರು 25ಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ಕವನ ವಾಚನ ಮಾಡಿದರು.