ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರ, ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ರಸ್ತೆಯಲ್ಲಿಯೇ ಚಾಪೆ ಹಾಕಿ ಮಲಗಿ ಪ್ರತಿಭಟಿಸಿರುವ ಘಟನೆ ನಡೆದಿದೆ.
ಇಲ್ಲಿನ ಮೈಸೂರು ಬ್ಯಾಂಕ್ ವೃತ್ತ ರಸ್ತೆಯ ಮೇಲೆ ಚಾಪೆ ಹಾಕಿ ಉರುಳು ಸೇವೆ ಮಾಡಿದ ಅವರು, ಖಾಸಗಿ ಆಸ್ಪತ್ರೆಗಳು ಹಗಲು ದರೋಡೆ ನಿಲ್ಲಿಸಬೇಕು, ಸರ್ಕಾರಿ ಆಸ್ಪತ್ರೆಗಳ ನರಕ ತಪ್ಪಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸಾವಿನ ಮನೆಯಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು, ಬಡವರು, ಆಟೋ ಚಾಲಕರು ಸೇರಿದಂತೆ ಪ್ರತಿಯೊಬ್ಬರಿಗೂ ಕನಿಷ್ಠ ತಿಂಗಳಿಗೆ 10 ಸಾವಿರ ರೂಪಾಯಿಗಳನ್ನು ಸರ್ಕಾರ ಪರಿಹಾರವಾಗಿ ನೀಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.