ಕೋವಿಡ್ ಮಾರ್ಗಸೂಚಿ ಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್

ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು: ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಕೋವಿಡ್ ಮಾರ್ಗಸೂಚಿ ಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೋನ್ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಯಾವ ರೀತಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಖುದ್ದು ಜಿಲ್ಲಾಧಿಕಾರಿ ಗಳು ನಗರಕ್ಕೆ ಆಗಮಿಸಿದರು.
ಕೋವಿಡ್ ಕರೆ ಸೆಂಟರ್ ಹಾಗೂ ಸಾರ್ವಜನಿಕ ಆಸ್ಪತ್ರೆ ಭೇಟಿ: ನಗರದ ಶಿವಜ್ಯೋತಿ ನಗರದಲ್ಲಿ ಇರುವ ಕೋವಿಡ್ ಕರೆ ಸೆಂಟರ್ ಗೆ ಭೇಟಿ ನೀಡಿ ತಾಲೂಕು ಆಡಳಿತದಿಂದ ಮಾಡಿರುವ ವ್ಯವಸ್ಥೆ ಯನ್ನು ಪರಿಶೀಲನೆ ನಡೆಸಿ ಕೋವಿಡ್ ಕರೆ ಸೆಂಟರ್ ಬರುವ ಸೋಂಕಿತರಿಗೆ ಊಟ ಉಪಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು ಪುರೈಕೆ ಯಾಗು ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇನ್ನೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಗೆ ಭೇಟಿ ಸೋಂಕಿತರಿಗೆ ಮಾಡಲ್ಪಟ್ಟ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿ. ವೆಂಟಿಲೇಟರ್,ಆಕ್ಸಿಜನ್ ಸಮಸ್ಯೆ ಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸೋಂಕಿತರಿಗೆ ಚಿಕಿತ್ಸೆ ನೀಡುವ ಎಲ್ಲಾ ಆರೋಗ್ಯ ಸಿಬ್ಬಂದಿ ಗಳಿಗೆ ತರಬೇತಿ ನೀಡಬೇಕು ಎಂದು ತಿಳಿಸಿದರು.
ನಂತರ ತಹಶಿಲ್ ಕಛೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ಕೋವಿಡ್ ಎರಡನೇ ಅಲೆ ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ಸರ್ಕಾರ ಹಾಗೂ ಜಿಲ್ಲಾಡಳಿತ ದಿಂದ ಹೊರಡಿಸಿರುವ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡಬೇಕು
ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಲಿಂಗಸೂಗೂರು ಸಹಾಯಕ ಆಯುಕ್ತ ರಾಜಶೇಖರ್ ಡಂಬಳ,
ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಭೋಗಾವತಿ, ಡಿವೈಎಸ್ಪಿ ವಿಶ್ವನಾಥ ರಾವ್ ಕುಲಕರ್ಣಿ, ತಾಲೂಕು ಪಂಚಾಯತ ಇ.ಓ ಪವನ್ ಕುಮಾರ್, ನಗರ ಸಭೆ ಪೌರಾಯುಕ್ತ ಆರ್.ವಿರುಪಾಕ್ಷ ಮೂರ್ತಿ,
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾದ ಡಾ.ಹನುಮಂತರೆಡ್ಡಿ ದೇಸಾಯಿ,ಡಾ.ಅಯ್ಯನಗೌಡ, ಡಾ.ಜೀವನೇಶ್ವರ್ ರಾವ್,ಪಿಎಸ್ಐ ವಿಜಯ ಕೃಷ್ಣ ಸೇರಿದಂತೆ ಇತರರು ಭಾಗವಹಿಸಿದ್ದರು

Share and Enjoy !

Shares