ವಿಜಯನಗರ ವಾಣಿ ಸುದ್ದಿ
ಬಳ್ಳಾರಿ ಜಿಲ್ಲೆ:
ಸಿರುಗುಪ್ಪ: ತಾಲೂಕಿನಲ್ಲಿ ಕೋವಿಡ್ ಸೊಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಅವಶ್ಯವಿದ್ದರೆ ಮಾತ್ರ ಮನೆಯಿಂದ ಹೊರಕ್ಕೆ ಬರಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು, ಇದರಿಂದ ಕೋವಿಡ್ ಸೊಂಕು ಹರಡುವುದನ್ನು ತಡೆಯಲು ಸಾಧ್ಯವಿದೆ ಎಂದು ಬಿ.ಜೆ.ಪಿ. ಯುವಮೋಚಾ ತಾ.ಅಧ್ಯಕ್ಷ ಎಂ.ಎಸ್.ಸಿದ್ದಪ್ಪ ತಿಳಿಸಿದರು.
ನಗರದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುವ ಸೊಂಕಿತರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ಕೋವಿಡ್ ಸೊಂಕನ್ನು ತಡೆಯಲು ಸರ್ಕಾರ ಅನೇಕ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ, ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಎಲ್ಲಾರು ಕಡ್ಡಾಯವಾಗಿ ಪಾಲಿಸುವುದರಿಂದ ಕೋವಿಡ್ ಸೊಂಕಿನ ಸರಪಳಿಯನ್ನು ಕತ್ತರಿಸಲು ಅನುಕೂಲವಾಗುತ್ತದೆ. ಅಲ್ಲದೆ ಪ್ರತಿಯೊಬ್ಬರು ಹೊರಗಡೆ ವ್ಯವಹಾರ ಮಾಡುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಸರ್ಕಾರ ಜಾರಿಗೆ ತಂದಿರುವ ಲಾಕ್‍ಡೌನ್‍ಗೆ ಪ್ರತಿಯೊಬ್ಬರು ಬೆಂಬಲನೀಡಿದಾಗ ಮಾತ್ರ ಕೊರೊನಾವನ್ನು ದೇಶದಿಂದ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ದೇವರಾಜ್, ಮುಖಂಡರಾದ ಮಹಾದೇವ, ಮೇಕೇಲಿ ವೀರೇಶ, ಬಂಡ್ರಳಾ ಮಲ್ಲಿಕಾರ್ಜುನ, ಫ್ರೂಟ್ ಗಂಗಾಧರ, ಮುರಳಿಮೋಹನ್ ರೆಡ್ಡಿ, ಎಸ್.ಮಲ್ಲಿಕಾರ್ಜುನ, ಬಿ.ಎನ್.ಕುಮಾರ್ ಇದ್ದರು.