ವಿಜಯನಗರವಾಣಿ ಸುದ್ದಿ
ರಾಯಚೂರು ಜಿಲ್ಲೆ
ಲಿಂಗಸುಗೂರ . ಕ್ಷೇತ್ರದ ಅಭಿವೃದ್ಧಿಗೆ ಡಿ.ಎಸ್. ಹೂಲಗೇರಿ ಶಾಸಕರು ಇಂದು ಬೆಂಗಳೂರಿನಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್.
ಇವರನ್ನು ಭೇಟಿಯಾಗಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ MICRO ಮತ್ತು MACRO ಯೋಜನೆ ಅಡಿಯಲ್ಲಿ ಕಾಮಗಾರಿಗಳು ವಿಳಂಬ ವಾಗುತ್ತಿರುವುದು, ಹಾಗೂ ಈಗಾಗಲೇ ಮಂಜೂರಾಗಿರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯುವಂತೆ ಅನುಮೋದನೆ ನೀಡಲು ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದ ಬಿಡುಗಡೆಯ ಬಗ್ಗೆಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಮರೇಗೌಡ .ಪಾಟೀಲ. ಬಯ್ಯಾಪುರ ರವರು ಉಪಸ್ಥಿತರಿದ್ದರು..