ವಿಜಯನಗರವಾಣಿ ಸುದ್ದಿ
ಹಟ್ಟಿ:ಲಿಂಗಸೂಗುರು ತಾಲೂಕಿನ ಗೌಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚನೂರು ಗ್ರಾಮದಲ್ಲಿ ಇಂದು ಲಿಂಗಸೂರು ಕ್ಷೇತ್ರದ ಶಾಸಕರಾದ ಶ್ರೀ ಡಿ.ಎಸ್ ಹೂಲಿಗೇರಿಯವರು 2020-21 ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ 40 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಗುತ್ತಿಗೆದಾರರು ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ಸೂಚಿಸಿದರು.ಲಿಂಗಸೂಗುರು ಕ್ಷೇತ್ರದ ಗ್ರಾಮಿಣ ಭಾಗದ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿ ಅನುದಾನ ಬಿಡುಗಡೆ ಮಾಡಿಸಿ ತಾಲೂಕಿನಾದ್ಯಾಂತ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವೆ ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್ ಕರಡಕಲ್ ,ಶರಣಪ್ಪ ಮೇಟಿ,ಪಾಮಯ್ಯ ಮೂರಾರಿ, ತಾಲೂಕು ಪಂಚಾಯತ್ ಸದಸ್ಯ ಶಿವನಾಯಕ್ ಗ್ರಾಮದ ಮುಖಂಡರಾದ ವೀರಭದ್ರಪ್ಪಗೌಡ ಪೋಲಿಸ್ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಯಲ್ಲಪ್ಪ ಕಾಂಗ್ರೆಸ್ ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.