ತಾಪಂ, ಜಿಪಂ ಚುನಾವಣೆಯಲ್ಲಿ ಜನರು ಬಿಜೆಪಿ ಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಲಿದ್ದಾರೆ : ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ

ಕುರುಗೋಡು. ಜು.03
ತಾಪಂ, ಜಿಪಂ ಚುನಾವಣೆಯಲ್ಲಿ ಜನರು ಬಿಜೆಪಿ ದುರಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಹೇಳಿದರು.
ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಪತ್ರಿಕೆ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತಿನ ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ನೋಡಿ ದೇಶದ ಜನರು ಬೇಸತ್ತು ಹೋಗಿದ್ದಾರೆ. ಇದರಿಂದ ಮುಂಬುರುವ ತಾಪಂ, ಜಿಪಂ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ತಾಪಂ, ಜಿಪಂ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ಪ್ರಕಟಗೊಂಡಿದ್ದು ಮುಂದಿನ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರ ಜೊತೆಗೆ ಚರ್ಚಿಸಿ ಒಳ್ಳೆ ಸೂಕ್ತ ವಾದ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಲಾಗುವುದು. ಕಂಪ್ಲಿ ಮತ್ತು ಕುರುಗೋಡು ಕ್ಷೇತ್ರಗಳಲ್ಲಿ ತಾಪಂ. ಜಿಪಂ ಚುನಾವಣೆ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲ್ಲಿದೆ ಎಂದು ವಿಸ್ವಾಸ ವ್ಯಕ್ತಪಡಿಸಿದರು.
ಅಲ್ಲದೆ ಬಿಜೆಪಿ ಸರಕಾರ ಬಂಡವಾಳ ಶಾಹಿಗಳ ಪರ ಆಡಳಿತ ನಡೆಸುತ್ತಿದ್ದು ಬಡವರ ಹೊಟ್ಟೆ ಮೇಲೆ ಹೊಡಿಯುವಂತ ಕೆಲಸ ಮಾಡುತ್ತಿದ್ದಾರೆ. ಅಂಬಾನಿ, ಅದಾನಿ ಗಳಂತವರ ಮೇಲೆ ಸರಕಾರ ನಿಂತಿದೆ. ಇನ್ನೂ ಕೇಂದ್ರ ನರೇಂದ್ರ ಮೋದಿ ಸರಕಾರ ದಿನ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿಸುತ್ತಿದೆ. ಇದರಿಂದ ಜನ ಸಾಮಾನ್ಯರಿಗೆ ಕಠಿಣ ವಾಗಿದೆ. ಪೆಟ್ರೋಲ್, ಡೀಸೆಲ್, ಸಿಲಿಂಡರ್ ಸೇರಿದಂತೆ ದಿನ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಕೆ ಯಾಗುತ್ತಿದ್ದೂ ಇದರಿಂದ ಸಾರ್ವಜನಿಕರು ತಲ್ಲಣ ಗೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ದೇಶದಲ್ಲಿ ಬಿಜೆಪಿ ಸರಕಾರ ಸತ್ತರೂ ಆಡಳಿತ ಕ್ಕೆ ಬರುವುದಿಲ್ಲ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.
ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ್ರೆ ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುವುದೇ ಇವರ ಸಾಧನೆಯಾಗಿದೆ. ಇನ್ನೂ ಕೋಮು ಗಲಭೆ, ಅತ್ಯಾಚಾರಗಳು,ಶಾಂತಿ ಹದೆಗೆಡುವುದು ಇತರೆ ಕೆಲಸ ಎಲ್ಲಂದರಲ್ಲಿ ಕಂಡುಬರುತ್ತಿದೆ. ಇತರ ಆಡಳಿತ ದಿಂದ ಜನರು ನಿತ್ಯ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ.
ಇದನ್ನು ಹೇಳಿಕೊಳ್ಳದೆ ಬಿಜೆಪಿ ನಾಯಕರು ಕಾಂಗ್ರೆಸ್ ಬಗ್ಗೆ ಇಲ್ಲ ಸಲ್ಲದ ಆರೋಪಗಳು ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಇದು ಬಹಳ ದಿನ ನಡೆಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ್, ಪಕ್ಷದ ಮುಖಂಡರಾದ ಸುಧೀರ್, ಶ್ರೀನಿವಾಸ್, ನಾರಾಯಣಪ್ಪ, ಸುರೇಶ್ ರೆಡ್ಡಿ, ವೆಂಕಟ ರಾಮರಾಜು, ಕರಿಬಸವನ ಗೌಡ, ಸೇರಿದಂತೆ ಇತರರು ಇದ್ದರು.

Share and Enjoy !

Shares