ವಿಜಯನಗರ ವಾಣಿ ಸುದ್ದಿ ರಾಯಚೂರು ಜಿಲ್ಲೆ
ಲಿಂಗಸುಗೂರು ; ಉಪವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ರಾಜ್ಯಪಾಲರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ಥರಕನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಮುಂದಿನ ಆದೇಶದವರೆಗೆ ಲಿಂಗಸುಗೂರು ಉಪ ವಿಭಾಗಧಿಕಾರಿಯಾಗಿದ್ದ ಕೆ ಎ ಎಸ್ ಶ್ರೇಣಿಯ ಅಧಿಕಾರಿ ರಾಜಶೇಖರ ಡಂಬಳ ಅವರನ್ನು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ಹುದ್ದೆಯ ನಿರೀಕ್ಷೆಯಲ್ಲಿದ್ದ 2019ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಸಂಕನೂರ ಅವರನ್ನು ನೇಮಕ ಮಾಡಲಾಗಿದೆ.