ಕೋವಿಡ್-19 ಸೋಂಕು ಪರಿಸ್ಥಿತಿ ಕುರಿತು 6ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪಿಎಂ ಸಭೆ

Share and Enjoy !

Shares
Listen to this article

ವಿಜಯನಗರ ವಾಣಿ

ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಪ್ರಧಾನಮಂತ್ರಿಗಳು ನಡೆಸುತ್ತಿರುವ ಈ ವಿಡಿಯೋ ಸಂವಾದದಲ್ಲಿ ಕರ್ನಾಟಕ ಸಿಎಂ ಬಿ.ಎಸ್. ಯಡಯೂರಪ್ಪ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶ ಸಿಎಂ ಜಗನ್‌ಮೋಹನ್ ರೆಡ್ಡಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಕೇರಳದ ಸಿಎಂ ಪಿಣರಾಯಿ ವಿಜಯನ್‌ ಅವರು ಪಾಲ್ಗೊಂಡಿದ್ದಾರೆ.

ವಿಡಿಯೋ ಸಂವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 6 ರಾಜ್ಯಗಳ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಸ್ಥಿತಿ ಹಾಗೂ ಲಸಿಕೆ ಅಭಿಯಾನದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,949 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 542 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

Share and Enjoy !

Shares