ಬಳ್ಳಾರಿ: ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸು ತ್ತಿರುವ ಕಟ್ಟಡಗಳ ನವೀಕರಣ ಮತ್ತು ಹೊಸ ಕಟ್ಟಡಗಳು ನಿರ್ಮಾಣ ಮಾ ಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ಎಂದು ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು.
ನಗರದ ಸರಕಾರಿ ಅತಿ ಥಿಗೃಹದ ಸಮೀಪ ನಿರ್ಮಾಣವಾಗು ತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ಪ್ರಗತಿ ಮತ್ತು ಇಲಾ ಖೆಗಳ ಕಚೇರಿ ಹಂಚಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಜಿಲ್ಲಾ ಕಚೇರಿಗಳು ಹಾಗೂ ಅತ್ಯವಶ್ಯಕ ನಾಗರಿಕ ಸೇವೆಗಳು ಒಂದೇ ಛಾವಣಿಯಡಿ ನಾಗರಿಕರಿಗೆ ಸುಲಭವಾಗಿ ದೊರಕಲಿ ಎಂಬ ಸದುದ್ದೇಶ ದಿಂದ ಬಳ್ಳಾರಿಯ ಡಾ.ರಾಜ್‍ಕುಮಾರ ರಸ್ತೆಯಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಇನ್ನೂ ಕೆಲ ದಿನಗಳಲ್ಲಿ ಸರಕಾರಿ ಕಚೇರಿಗಳಿಗೆ ಹಂಚಿಕೆಯಾಗಲಿವೆ ಎಂದು ತಿಳಿಸಿದ ಡಿಸಿ ಮಾಲಪಾಟಿ ಅವರು ಈ ಸಂದರ್ಭ ದಲ್ಲಿ ಇಲಾಖೆಗಳ ಅಧಿಕಾರಿಗಳು ತಮ್ಮ ಈಗಿರುವ ಕಚೇರಿ ಗಳನ್ನು ನವೀಕರಣ ಮಾಡುವುದು ಮತ್ತು ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳ ನೂತನ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮುಂದಾಗುವುದು ಬೇಡ; ಆ ರೀತಿಯಾ ದಲ್ಲಿ ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆದುಕೊಂಡು ಮುಂದು ವರಿಯಬೇಕು ಎಂದು ಅವರು ಸೂಚನೆ ನೀಡಿದರು.
ತಹಸೀಲ್ದಾರರ ಕಚೇರಿ, ಖಜಾನೆ, ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಆರೋಗ್ಯ ಇಲಾಖೆ, ಜವಳಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಹಕಾರ ಸಂಘಗಳ ಇಲಾಖೆ, ವಿಭಾಗೀಯ ಲೆಕ್ಕಾಧಿಕಾರಿಗಳ ಕಚೇರಿ, ವಾರ್ತಾ ಇಲಾಖೆ, ಭೂ ದಾಖಲೆ ಇಲಾಖೆ, ಅಂಕಿಸಂಖ್ಯೆ ಇಲಾಖೆ ಸೇರಿದಂತೆ ಬಹಳಷ್ಟು ಇಲಾಖೆಗಳು ನೂತನವಾಗಿ ನಿರ್ಮಾ ಣವಾಗುತ್ತಿರುವ ಜಿಲ್ಲಾ ಸಂಕೀರ್ಣದಲ್ಲಿ ಕಾರ್ಯನಿರ್ವ ಹಿಸಲಿವೆ ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳಿಗೆ ಈ ನೂತನ ಜಿಲ್ಲಾ ಸಂಕೀರ್ಣದಲ್ಲಿ ಹಂಚಿಕೆ ಮಾಡಲಾಗಿರುವ ವಿಸ್ತೀರ್ಣ ಸಮರ್ಪಕವಾಗಿದೆಯೇ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅವಶ್ಯವೇ ಹಾಗೂ ಇನ್ನೀತರ ಮಾಹಿತಿಗಳನ್ನು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಡಿಸಿ ಮಾಲಪಾಟಿ ಅವರು ಪಡೆದುಕೊಂಡರು. ಜಿಲ್ಲಾ ಸಂಕೀರ್ಣ ನಿರ್ಮಾ ಣದ ಹೊಣೆ ಹೊತ್ತಿರುವ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಅವರು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಪ್ರೋಬೆಷನರಿ ಐಎಎಸ್ ಅನ್ಮೋಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.