ಅಪ್ಪ ಬೂಟಿನಲ್ಲಿ ಹೊಡೆದಿದ್ದಕ್ಕೆ ರೈಲ್ ಗೆ ತಲೆಕೊಟ್ಟು ಆತ್ಮಹತ್ಯೆಗೆ ಪ್ರಯತ್ನಿಸಿದ್ದೆ : ಜಗ್ಗೇಶ್

Share and Enjoy !

Shares
Listen to this article

ವಿಜಯನಗರ ವಾಣಿ ¸

ಅಪ್ಪ ಎಲ್ಲರೆದು ಹೊಡೆದರು ಎಂದು ‘ನವರಸನಾಯಕ’ ಜಗ್ಗೇಶ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರಂತೆ, ಈ ಹಿಂದೆ ಈಶ್ವರನಾಗಿದ್ದ ಅವರು ಕನ್ನಡ ಚಿತ್ರರಂಗಕ್ಕೆ ಜಗ್ಗೇಶ್ ಆಗಿ ಪರಿಚಿತರು. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಅನುಭವ ಹಂಚಿಕೊಂಡಿದ್ದಾರೆ.

ಅಂದು ಈ ಜಗ್ಗೇಶ ಶಾಲೆಯಲ್ಲಿ ಈಶ್ವರ!
ತಾತ ರಾಜಣ್ಣನಂತೆ ನಟನಾಗು ಎಂದು ತಲೆಯಲ್ಲಿ ಹುಳಬಿಟ್ಟ. ಅದು ನನ್ನ ಚಿಂತನೆಯ ಚಿತೆಯಾಯಿತು.
ಪರೀಕ್ಷೆ ಅರ್ಧ ಮನಸ್ಸಲ್ಲೆ ಓದಿ ಬರೆದೆ. ಯಾಕೋ ಕನ್ನಡಮಾತ್ರ ನನ್ನ ಅಚ್ಚುಮೆಚ್ಚಿನ ವಿಷಯವಾಯಿತು. ಕನ್ನಡ ವ್ಯಾಕರಣ ಸಿಹಿ ತಿನಿಸಂತೆ ಪ್ರೀತಿ! ಬಾಲ್ಯದಿಂದ ಕನ್ನಡ ಭಾಷೆ ಪ್ರೀತಿ ಹುಟ್ಟಿದರೆ ಸಾಯುವವರೆಗು ಅದು ಅವನ ಹೃದಯದ ನಾಡಿಬಡಿತದಂತೆ ಜೊತೆ ಉಳಿಯುತ್ತದೆ. ಸ್ವಾರ್ಥಕ್ಕೆ ಬಳಕೆಯಾದರೆ ಆತ್ಮಧ್ರೋಹವಾಗುತ್ತದೆ.

ಈ ಅಂಕ ನೋಡಿದ ಅಪ್ಪ ನಡುರೋಡ್‌ನಲ್ಲಿ ಜನನೋಡುವಂತೆ ಬೂಟಿನಲ್ಲಿ ಹೊಡೆದುಬಿಟ್ಟರು. ಅಪಮಾನ ಸಹಿಸಲಾಗದೆ ಆತ್ಮಹತ್ಯಗೆ ಯತ್ನಿಸಿದ್ದೆ. ಆಗ ದಿವಂಗತ ಶ್ರೀರಾಮಪುರದ ಕಿಟ್ಟಿ (ಆ ದಿನಗಳು ಕುಖ್ಯಾತಿ) ನನ್ನ ಬಾಚಿ ಎಳೆದು ರೈಲಿನ ಅನಾಹುತ ತಪ್ಪಿಸಿದ. ಆ ವಿಷಯ ತಿಳಿದು ಅಪ್ಪನಿಗೆ ದುಃಖವಾಗಿ ಮನನೊಂದು ಬಂಧುಮಿತ್ರರ ಮುಂದೆ ಕಣ್ಣೀರು ಇಟ್ಟು ಪಶ್ಚಾತಾಪಪಟ್ಟರು.

ಅಂದು ಅನಾಹುತ ಸಂಭವಿಸಿದ್ದರೆ ಇಂದು ಈಶ್ವರ ಜಗ್ಗೇಶನಾಗಿ ಇರುತ್ತಿರಲಿಲ್ಲಾ. ಬದಲಾಗಿ ಸತ್ತ ಕೋಟಿ ಜನರಲ್ಲಿ ಒಬ್ಬನಾಗುತ್ತಿದ್ದೆ. ತಂದೆ-ತಾಯಿ ಮಕ್ಕಳನ್ನು ಬರಿ ಓದಿನ ಯಂತ್ರವಾಗಿ ಬೆಳೆಸದೆ ಜಗದಪಾಠ ಕಲಿಸುವ ಯತ್ನಮಾಡಿ. ಓದಿದ ಮಕ್ಕಳು ಸರ್ಕಸ್ ಸಿಂಹದಂತೆ ಓದಿನ ಜೊತೆಗೆ ಜಗದಪಾಠ ಕಲಿತವರು ಬೇಟೆಯಾಡುವ ಕಾಡಿನಸಿಂಹದಂತೆ.

ಇಂದಿನ ಜಗತ್ತಿಗೆ ಮಕ್ಕಳು ಬೇಟೆಯಾಡುವ ಸಿಂಹದಂತೆ ಬಾಳಬೇಕು ಕಾರಣ ಜಗ ಕಾಡಿನಂತೆ ಆಗಿದೆ, ಮನುಷ್ಯ ಬೇಟೆಯಾಡುವ ಪ್ರಾಣಿಯಂತೆ. ಇಂಥ ಸಮಯದಲ್ಲಿ ಮಕ್ಕಳು ಕಾಡು ಸಿಂಹವಾದರೆ, ಕೆಣಕುವವರು ದೂರ ಉಳಿಯುತ್ತಾರೆ! ಎಸ್‌ಎಸ್‌ಎಲ್‌ಸಿ ಫಲಿತಾಂಶ ಏನೇ ಬರಲಿ ನಿಮ್ಮ ಮಕ್ಕಳ ಸಿಂಹದಂತೆ ಸಾಕಿ…ಮಿಕ್ಕಂತೆ ಜಗತ್ತೆ ಮನುಜನಿಗೆ ಜೀವನಪಾಠ ಕಲಿಸುತ್ತದೆ.
ಅಮರ ಹಳೆ ನೆನಪು…

Share and Enjoy !

Shares