ವಿಜಯನಗರ ವಾಣಿ
ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ.
ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್(BDS)ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ )OBC) ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.
ಮೆಡಿಕಲ್ ಕಾಲೇಜುಗಳಲ್ಲಿ ಓಬಿಸಿ (OBC) ಮತ್ತು ಇಡಬ್ಲುಎಸ್ (EWS) ಕೆಟಗರಿಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.
ಈ ಮೀಸಲಾತಿಯಿಂದಾಗಿ ಎಂಬಿಬಿಎಸ್ನ 1,500 ಒಬಿಸಿ (OBC) ಅಭ್ಯರ್ಥಿಗಳು, ಸ್ನಾತಕೋತ್ತರ ವಿಭಾಗದ 2,500 ಒಬಿಸಿ ವಿದ್ಯಾರ್ಥಿಗಳು, ಎಂಬಿಬಿಎಸ್ನ ಆರ್ಥಿಕವಾಗಿ ಹಿಂದುಳಿದ (EWS) 550 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿಭಾಗದ 1000 EWS ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.