ಕಾನೂನು ಚೌಕಟ್ಟಿನಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ಜಿಲ್ಲಾಧಿಕಾರಿ

Share and Enjoy !

Shares
Listen to this article

ರಾಯಚೂರು: ಜಿಲ್ಲೆಯಲ್ಲಿ ಹೊಸ ಮರಳು ನೀತಿ ಅನ್ವಯ ಮರಳು ಗಣಿಗಾರಿಕೆ, ಮರಳು ದಾಸ್ತಾನು ಹಾಗೂ ಮರಳು ಸಾಗಾಣಿಕೆ ಚಟುವಟಿಕೆಗಳು ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಮರುಳು ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ವಿವಿಧ ಇಲಾಖೆ ಅಧಿಕಾರಿಗಳಿಗೆ ಹಾಗೂ ಮರಳು ಗಣಿಗಾರಿಕೆ ಪರವಾನಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಆ.2ರ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 21 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದ್ದು, ಮರಳು ಗಣಿಗಾರಿಕೆ ಮತ್ತು ಮರಳು ದಾಸ್ತಾನು ಹಾಗೂ ಮರಳು ಸಾಗಣಿಕೆ ಬಗ್ಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕ್ರವ ವಹಿಸಬೇಕು.
ಮರಳು ದಾಸ್ತಾನಿಗೆ ಬಳಕೆಮಾಡುವ ಭೂಮಿಯನ್ನು ಕೃಷಿಯೇತರ ಭೂಮಿ ಎಂದು ಪರಿವರ್ತಿಸಿಕೊಳ್ಳಬೇಕು. ಮರಳು ದಾಸ್ತಾನು ಭೂಮಿಯನ್ನು ಸರಕಾರ ವಶಪಡಿಸಿಕೊಳ್ಳಲಿದೆ. ಮರಳುಗಣಿಗಾರಿಕೆ ಪರವಾನಿಗೆದಾರರು ಮರಳು ಸಾಗಾಣಿಕೆಯ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಿಕೊಳ್ಳಬೇಕು ಎಂದರು. 2020 ಹೊಸ ಮರಳು ನೀತಿ ಪ್ರಕಾರ ಗ್ರಾಮ ಮಟ್ಟದಲ್ಲಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯವಿರುವ ಹಳ್ಳ, ನದಿ ಪಾತ್ರದಲ್ಲಿ ಮರಳು ನಿಕ್ಷೇಪಗಳನ್ನು ಗುರುತಿಸಬೇಕು. ಮರಳು ನಿಕ್ಷೇಪಗಳ ಗುರುತಿಸುವುದು, ತೆಗೆಯುವ ಮತ್ತು ವಿಲೇವಾರಿ ಮಾಡುವ ಸಂಪೂರ್ಣ ಹೊಣೆಗಾರಿಕೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಯೂಸರ್ ನೆಮ್ ಮತ್ತು ಪಾಸ್ವರ್ಡ್ ಪಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮರಳು ನಿಕ್ಷೇಪಗಳನ್ನು ಮತ್ತು ಅಲ್ಲಿನ ಸಂಪನ್ಮೂಲಗಳನ್ನು 300 ರೂಪಾಯಿಗಳಂತೆ ರಾಜ್ಯಧನ ವಸೂಲಿ ಮಾಡಿ ಪಂಚಾಯತ್ ಅಭಿವೃದ್ಧಿಗೆ ಅನುದಾನ ಬಳಕೆ ಮಾಡುವಂತೆ ತಿಳಿಸಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ನಿಕ್ಷೇಪಗಳನ್ನು ಗುರುತಿಸಲು ಮತ್ತು ಸಮಿತಿಯಲ್ಲಿರುವ ಸದಸ್ಯರಿಗೆ ತರಬೇತಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಶ್ವನಾಥ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪ್ರಕಾಶ ಅಮೃತ ನಿಕಂ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯಿತಿ ವತಿಯಿಂದ ಮನೆ ಅಥವಾ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಪರವಾನಿಗೆ ಪಡೆದ ವಾರಸುದಾ ರರಿಗೆ ಅಗತ್ಯವಿರುವ ಮರಳಿನ ಅಂದಾಜನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಖಾತ್ರಿಪಡಿಸಿ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಬೇಕು ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಕೆ. ಆರ್ ದುರುಗೇಶ್, ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ಲಿಂಗಸುಗೂರು ಸಹಾಯಕ ಆಯುಕ್ತ ರಾಹುಲ್ ಸಂಕನೂರು, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಸೇರಿದಂತೆ ವಿವಿಧ ತಾಲೂಕುಗಳ ತಾಸಿಲ್ದಾರರು ಉಪಸ್ಥಿತರಿದ್ದರು.

Share and Enjoy !

Shares