ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಅವರು ಇಂದು ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆ

Share and Enjoy !

Shares
Listen to this article

ವಿಜಯನಗರ ವಾಣಿ

ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಹಾಗೂ ಅವರ ಅಭಿಮಾನಿಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವರು, ಶಾಸಕರು, ಪ್ರಮುಖರು ಉಪಸ್ಥಿತರಿದ್ದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬಿಜೆಪಿ ಸೇರ್ಪಡೆಯಾದರು.

ಈ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದರು.

ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದೆ ಎಂದು ಹೇಳಿದರು.

Share and Enjoy !

Shares