ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಲಾಕ್ ಡೌನ್

Share and Enjoy !

Shares
Listen to this article

ವಿಜಯನಗರ ವಾಣಿ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಲಾಗಿದೆ. ಇಂದಿನಿಂದ ರಾತ್ರಿ 10 ಗಂಟೆ ಬದಲು ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದರು.

ಇನ್ನು ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದಲೇ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ನಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.

Share and Enjoy !

Shares