ವಿಜಯನಗರವಾಣಿ ಸುದ್ದಿ : ರಾಯಚೂರು ಜಿಲ್ಲೆಯ
ಲಿಂಗಸುಗೂರು ತಾಲೂಕಿನ ಮ್ಯಾದರಗಡ್ಡೆ, ನಡುಗಡ್ಡೆ, ತವದ ಗಡ್ಡೆ ವಾಸಿಸುವ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಲಿಂಗಸುಗೂರು ಶಾಸಕ ಡಿ ಎಸ್ ಹೂಲಗೇರಿ ಜಿಲ್ಲಾ ಉಸ್ತುವಾರಿ ಸಚಿವ.ವಿ ಸೋಮಣ್ಣ ರವರಿಗೆ ಮನವಿ ಮಾಡಿಕೊಂಡಿದ್ದಾರೆ,
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ Covid-19 ಮೂರನೆ ಅಲೆ ನಿಯಂತ್ರಣ ಹಾಗೂ ನೆರೆಹಾವಳಿ ಪ್ರದೇಶಗಳ ಬಗ್ಗೆ ಕರೆದಿರುವ ಸಭೆಯಲ್ಲಿ ಭಾಗವಹಿಸಿ ಶಾಸಕ ಹೂಲಗೇರಿ ಮನವಿ ಮಾಡಿಕೊಂಡರು.