ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 511 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಆಗಸ್ಟ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ಹುದ್ದೆಗಳ ವಿವರ :
ಟ್ರೈನಿ ಇಂಜಿನಿಯರ್ -I – 203 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ – I – 308 ಹುದ್ದೆಗಳು
ಒಟ್ಟು 511 ಹುದ್ದೆಗಳು
ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಯೋಮಿತಿ :
-ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ 25 ವರ್ಷ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
-ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 15,2021ರೊಳಗೆ ಅರ್ಜಿ ಸಲ್ಲಿಸಬಹುದು.